ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಆಗುಂಬೆ ಘಾಟಿನಲ್ಲಿ ನಾಳೆಯಿಂದ ಬಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟ್ ನಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದೆ ಜೂನ್ 28 ರಿಂದ ಸೆಪ್ಟೆಂಬರ್ 15 ರವರೆಗೆ ಬಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಜಿಲ್ಲೆ ಸೇರಿದಂತೆ ಸರಕು ಸಾಗಾಣಿಕೆ ವಾಹನಗಳು ಸಂಚಾರವನ್ನು ನಿಷೇಧಿಸಲಾಗಿದೆ ಇದಕ್ಕೆ ಬದಲಾಗಿ ಮಾರ್ಗಸೂಚಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶವನ್ನು ಹೊರಡಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸೇರಿದಂತೆ ಯಾವುದೇ ಪ್ರದೇಶಗಳ ಸರಕು ಸಾಗಾಣಿಕ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ತೀರ್ಥಹಳ್ಳಿ ಉಡುಪಿ ಮಾರ್ಗದಲ್ಲಿ ಸಂಚರಿಸುವ ಬಾರಿ ವಾಹನಗಳಿಗೆ ಬದಲಿ ಮಾರ್ಗವನ್ನು ಸೂಚಿಸಲಾಗಿದೆ. ತೀರ್ಥಳ್ಳಿ ಮಾಸ್ತಿ ಕಟ್ಟೆ ಸಿದ್ದಾಪುರ ಕುಂದಾಪುರ ಉಡುಪಿ ಮಾರ್ಗವಾಗಿ ಬಾರಿ ವಾಹನಗಳು ಸಂಚಾರಿಸಿವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಮಲೆನಾಡಿನ ಕೆಲ ಭಾಗದಲ್ಲಿ ಅಂದರೆ ತೀರ್ಥಳ್ಳಿ ಶೃಂಗೇರಿ ಭಾಗದ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ತುಂಗಭದ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗಾಜನೂರು ಡ್ಯಾಮ್ ತುಂಬಲು ಹೆಚ್ಚುವರಿ ನೀರನ್ನು ನದಿಗೆ ಹರಿ ಬಿಡಲಾಗುತ್ತದೆ.
ಎಂದು ತುಂಗಭದ್ರಾ ಜಲಾಶಯದಿಂದ 6000 ಕ್ಯೂಸೆಟ್ ನೀರನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ಮುನ್ಸೂಚನೆ ನೀಡಿ ಈ ಮಲೆನಾಡು ಪ್ರದೇಶವನ್ನು ಡೇಂಜರ್ ಅಲರ್ಟ್ ಎಂದು ಘೋಷಿಸಲಾಗಿದೆ.