ಬೆಳಗಾವಿ : ಹೆಸ್ಕಾಂ ಮಾಜಿ ಕಾರ್ಯಪಾಲಕ ಇಂಜಿನಿಯರ್ ಟಿ.ಬಿ.ಮಜ್ಜಗಿ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದ 13 ಮಂದಿಯನ್ನು ದೋಷಿ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಅತ್ಯಾಚಾರದ ದೂರುದಾರೆ ಬಿ.ವಿ ಸಿಂಧೂ ಸೇರಿ 13 ಜನರಿಗೆ 3 ವರ್ಷ ಆರು ತಿಂಗಳು ಜೈಲು ಶಿಕ್ಷೆ ಹಾಗೂ 13 ಆರೋಪಿಗಳಿಗೂ ತಲಾ 86 ಸಾವಿರ ರೂ.ದಂಡ ವಿಧಿಸಿ ನ್ಯಾಂಡಿಶ್ ಎಲ್.ವಿಜಯಲಕ್ಷ್ಮಿದೇವಿ ಮಹತ್ವದ ತೀರ್ಪು ಹೊರಡಿಸಿದ್ದಾರೆ.
ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರ ತುಕಾರಾಮ್ ಮಜ್ಜಿಗೆ ವಿರುದ್ಧ ಬಿ.ಎ ಸಿಂಧೂ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. 2014 ನವೆಂಬರ್ 19ರಂದು ಮಾಳಮಾರುತಿ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಕೇಸ್ ದಾಖಲಾಗಿತ್ತು.
ದೂರಿನ ಆಧಾರದ ಮೇಲೆ ಪೊಲೀಸರು ಟಿ.ಬಿ.ಮಜ್ಜಗಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ಪೊಲೀಸರು ತನಿಖೆ ನಡೆಸಿದಾಗ ಇದೊಂದು ಸುಳ್ಳು ಪ್ರಕರಣ ಎಂದು ತಿಳಿದು ಬಂದಿದೆ. ಅವರು ನ್ಯಾಯಾಲಯಕ್ಕೆ ‘ಬಿ ರಿಪೋರ್ಟ್’ ಸಲ್ಲಿಸಿದ್ದರು.
ಅಂದಿನಿಂದ ಸುಧೀರ್ಘ ವಿಚಾರಣೆ ನಡೆಸಿ ಪೀಠವು ಇಂದು ನ್ಯಾಯಾಧೀಶ ಎಲ್.ವಿಜಯಲಕ್ಷ್ಮಿದೇವಿ ಅವರಿಂದ ಮಹತ್ವದ ಆದೇಶ ಹೊರದಿಸಿದ್ದಾರೆ.