ಚಳ್ಳಕೆರೆ : ತಾಲೂಕು ಹೋಬಳಿ ಮಟ್ಟದಲ್ಲಿ ಏರ್ಪಡಿಸಲಾಗಿದ್ದ ಪಿಂಚಣಿ ಅದಾಲತ್ ಸೌಲಭ್ಯಗಳನ್ನು ಸದುಪಯೋಗವನ್ನು ಅರ್ಹ ಫಲಾನುಭವಿಗಳಿಗೆ ಪಡೆಯುವಂತೆ ಕಂದಾಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ಟಿ ರಘುಮೂರ್ತಿಯವರು ಭಾಗವಹಿಸಿದ್ದರು.
ನಗರದ ತಾಲೂಕು ಕಚೇರಿಯ ಅವರಣದಲ್ಲಿ ಆಯೋಜಿಸಿದ ಪಿಂಚಣಿ ಅದಾಲತ್ ನಲ್ಲಿ ಫಲಾನುಭವಿಗಳಿಗೆ ಮಂಜುನಾಥ ಪತ್ರ ವಿತರಣೆ ಮಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳನ್ನು ತಪ್ಪಿಸಬೇಕು ಈ ನಿಟ್ಟಿನಲ್ಲಿ ಜವಾಬ್ದಾರಿಯುತ ಪ್ರತಿಯೊಬ್ಬರು ಕೈಜೋಡಿಸಿ ಯೋಜನೆಗಳ ಸಹಕಾರಕ್ಕೆ ಮುಂದಾಗಬೇಕು.
ಕಂದಾಯ ಇಲಾಖೆಯಿಂದ ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ ವೇತನ ಮುಂತಾದ ಹಲವು ಪಿಂಚಣಿಗಳ ಯೋಜನೆ ಅರ್ಹರಿಗೆ ತಲುಪಿಸಬೇಕು ಎಂದು ಹೇಳಿದರು. ಈ ವೇಳೆ ಪಿಂಚಣಿ ಅದಾಲತ್ ನಲ್ಲಿ ಸ್ಥಳೀಯ ಹಾಗೂ ಸುತ್ತಲಿನ ಗ್ರಾಮೀಣ ಪ್ರದೇಶದ ಹಲವಾರು ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳಲ್ಲಿ ಮಂಜೂರಾದ ಪತ್ರಗಳನ್ನು ಶಾಸಕರು ವಿತರಿಸಿದರು.
ಜಿಲ್ಲಾ ಉಪ ವಿಭಾಗಾಧಿಕಾರಿ ಕಾರ್ತಿಕ್ ಮಾತನಾಡಿ ಸರ್ಕಾರ ವಯೋ ವೃದ್ಧರಿಗೆ ಅಂಗವಿಕಲರಿಗೆ ಸೇರಿದಂತೆ ಇತರೆ ವರ್ಗದ ಸಾರ್ವಜನಿಕರ ಅನುಕೂಲಕ್ಕಾಗಿ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ ಸೇವೆ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಜಾಗೃತಿ ಯಾಗಬೇಕು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಕಂದಾಯ ಇಲಾಖೆ ಅಧಿಕಾರಿ ವರ್ಗ ಸಾರ್ವಜನಿಕರ ಸೇವೆಗಳನ್ನು ನಿರ್ವಹಿಸಲು ವಿಳಂಬ ನಿದ್ದೆ ಅನುಸರಿಸಿದರೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಈ ಯೋಜನೆಯನ್ನು ಜಾರಿಗೊಳಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಸಿಲ್ದಾರ್ ರೆಹಮಾನ್ ಪಾಷಾ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ವೀರಭದ್ರಪ್ಪ, ನಗರಸಭಾ ಸದಸ್ಯರಾದ ರಮೇಶ್ ಗೌಡ, ಸರ್ಕಾರದ ನಾಮ ನಿರ್ದೇಶಕ ಸದಸ್ಯ ನೇತಾಜಿ, ಆರ್ ಪ್ರಸನ್ನ ಕಾಂಗ್ರೆಸ್ ಮುಖಂಡ, ಎಚ್.ಎಸ್ ಸೈಯದ್, ಪಿಎಸ್ಐ ಸತೀಶ್ ನಾಯಕ್, ಗಾದ್ರಿಲಿಂಗಪ್ಪ ಸೇರಿದಂತೆ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು