ಹಿರಿಯೂರು ನಗರಸಭೆಯ ಸಭಾಂಗಣದಲ್ಲಿ ಭದ್ರ ಮೇಲ್ದಂಡೆ ಯೋಜನೆ ಮತ್ತು ನೇರ ರೈಲ್ವೆ ಯೋಜನೆ ಹಾಗೂ ಕೆ ಐ ಡಿ ಬಿ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ, ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಚುನಾವಣಾ ನೀತಿ ಸಂಹಿತೆಯಿಂದಾಗಿ ಯೋಜನಾ ಕಾಮಗಾರಿಗಳು ಮಂದಗತಿಯಲ್ಲಿ ಆಗಿದ್ದು ಇದೀಗ ಯೋಜನೆಗಳ ಪೂರ್ಣಗೊಳಿಸಲು ವೇಗವಾಗಿ ಮಾಡಬೇಕೆಂದು ತಿಳಿಸಿದರು.
ಬೋರನ ಕಣಿವೆ ಜಲಾಶಯದ ವಿವರ ಪರಿಶೀಲಿಸಿ ಹೆಚ್ಚಿನ ನೀರಿನ ಅಲೋಕೇಷನ್ ತಂದು ಅಲ್ಲಿಂದ ಗಾಯಿತ್ರಿ ಜಲಾಶಯಕ್ಕೆ ತರಲು ಕ್ರಮವಹಿಸಲು ಆಗುವುದು. ಹೊಸಹಳ್ಳಿ ಬ್ಯಾರೇಜಿನ ವಿದ್ಯುತ್ ಸಮಸ್ಯೆಯನ್ನು ಆ ಭಾಗದ ರೈತರೊಂದಿಗೆ ಚರ್ಚಿಸಿ ಬಗೆಹರಿಸಿ ಬಹುದೊಡ್ಡ ಈ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕೆಂದು ತಿಳಿಸಿದರು.
ಕೆ.ಐ.ಡಿ.ಬಿ ಅಧಿಕಾರಿ ಲಕ್ಷ್ಮೇಶ್ ಮಾತನಾಡಿ ಮೇಟಿ ಕೋರಿಕೆ ಕೈಗಾರಿಕಾ ಕಾರ್ಡರ್ ಯೋಜನೆಗೆ 1156 ಎಕ್ಕರೆ ಪ್ರದೇಶದಲ್ಲಿ 920 ಎಕರೆ ಪ್ರದೇಶದ ರೈತರಿಗೆ ಪರಿಹಾರ ನೀಡಲಾಗಿದೆ ಇನ್ನು 336 ಎಕರೆಗೆ ಪರಿಹಾರ ಕೊಡಬೇಕು ಇಲ್ಲಿಯವರೆಗೆ ರೂಪಾಯಿ 380 ಕೋಟಿ ಬಿಡುಗಡೆಯಾಗಿದೆ. ಅದರಲ್ಲಿ ರುಪಾಯಿ 312 ಕೋಟಿ ಪರಿಹಾರ ನೀಡಬೇಕಿದೆ.
ಮೇಟಿಕುರ್ಕೆ ಕರಿಯೋಬನಹಳ್ಳಿಯಲ್ಲಿ ಲೇಔಟ್ ಅನುಮೋದನೆ ಆಗಿದೆ ನಾಲ್ಕರಲ್ಲೇ ಮೂರು ಪ್ಯಾಕೇಜ್ ವರ್ಕ್ ಅವಾರ್ಡ್ ಸಿಕ್ಕಿದ್ದು ಕೆಲಸ ನಡೆಯುತ್ತಿದೆ. ಒಂದರಲ್ಲಿ ಕೆಲಸ ಶುರುವಾಗಿದೆ 1156 ಎಕರೆ ಪ್ರದೇಶದಲ್ಲಿ 764 ಎಕರೆ ಕೈಗಾರಿಕಾ ಪ್ರದೇಶವಾಗಿದ್ದು, ಉಳಿದ ಪ್ರದೇಶದಲ್ಲಿ ಉದ್ಯಾನವನ ಆಸ್ಪತ್ರೆ ವಸತಿ ಗೃಹಗಳಿಗೆ ಮೀಸಲಿರಿಸಲಾಗಿದೆ ಎಂದು ಹೇಳಿದರು.
ದಾವಣಗೆರೆ – ತುಮಕೂರು ನೇರ ರೈಲ್ವೆ ಯೋಜನೆಗೆ 1210 ಎಕರೆ ಭೂಮಿ ಬೇಕಾಗಿದ್ದು ಹಿರಿಯೂರಿನಲ್ಲಿ 55 ಕಿ.ಮೀ ಹಾದುವಾಗಲಿದೆ. ತಾಲೂಕಿನಲ್ಲಿ 113 ಎಕರೆ ಭೂಸ್ವಾಧೀನ ಬಾಕಿ ಇದೆ ಎರಡು ತಿಂಗಳಲ್ಲಿ 70 ಎಕರೆ ಭೂಸ್ವಾಧೀನ ಮಾಡಿಕೊಂಡು ಕೆಲಸ ಪ್ರಾರಂಭವಾಗುವುದು ಎಂದು ವಿಶೇಷ ಅಧಿಕಾರಿ ವಿವೇಕ್ ಸಭೆಗೆ ಮಾಹಿತಿ ನೀಡಿದರು.
ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಎಸ್ ಹೆಚ್ ಲಮಾಣಿ ಮಾತನಾಡಿ ಭದ್ರಾ ಮೇಲ್ದಂಡೆ ಯೋಜನೆಯಿಂದ ಅನುಮೋದನೆ ಆಗಿರುವ ಕೆರೆಗಳಿಗೆ ನೀರು ಬರಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜವನಗೊಂಡನ ಹಳ್ಳಿ ಹಾಗೂ ಕರಿಯಲ ಪಂಚಾಯಿತಿ ವ್ಯಾಪ್ತಿಗೆ ಎಲ್ಲಾ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಅಹಂಕಾರ ಉಂಟಾಗಿದೆ ನಮಗೆ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಕರೆಯಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಅವರು ಸಚಿವರಿಗೆ ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ ವೆಂಕಟೇಶ್, ಭದ್ರ ಮೇಲ್ದಂಡೆ ಯೋಜನೆ ಅಧಿಕಾರಿ ಎಸ್ ಹೆಚ್ ಲಾವಣಿ, ಕೆ ಐ ಬಿಬಿ ಅಧಿಕಾರಿ ಲಕ್ಷ್ಮೇಶ್, ಬೋಸ್ವಾಧೀನಾಧಿಕಾರಿ ವಿವೇಕ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಮಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.