ಬೆಂಗಳೂರು, ಜುಲೈ 01 : ಎಲ್ಪಿಜಿ ಸಿಲಿಂಡರ್ ಬಳಕೆದಾರರಿಗೆ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಿಹಿ ಸುದ್ದಿ ನೀಡಿದೆ.
ಜುಲೈ ತಿಂಗಳ ಆರಂಭದಲ್ಲೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿಯ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 31ರೂ. ಇಳಿಕೆ ಮಾಡಿದೆ. ಆದರೆ, ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೆ ಬದಲಾವಣೆಯಾಗಿಲ್ಲ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಸಿದ್ದರಿಂದ ಹೋಟೆಲ್ ಉದ್ಯಮಿಗಳಿಗೆ ಅನುಕೂಲವಾಗಿದೆ. ಆದರೆ, ಸಬ್ಸಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.