ಬೆಂಗಳೂರು : ಜೂನ್ 30, ಭಾರತೀಯ ನ್ಯಾಯ ಸಂಹಿತೆ-2023 (ಬಿಎನ್‌ಎಸ್) ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 (ಬಿಎನ್‌ಎಸ್‌ಎಸ್) ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ-2023 (ಬಿಎಸ್ಎ) ಕಾನೂನುಗಳು ದೇಶಾದ್ಯಂತ ಜುಲೈ 1 ಸೋಮವಾರ ದಿಂದ ಜಾರಿಗೆ ಬರಲಿವೆ.
ಈ ಮೂರೂ ಹೊಸ ಕಾನೂನುಗಳು 2023ರ ಡಿಸೆಂಬರ್‌ನಲ್ಲೇ ಸಂಸತ್ತಿನ ಅನುಮೋದನೆ ಪಡೆದು, ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದುಕೊಂಡಿವೆ.
ಈ ಕಾಯ್ದೆಗಳನ್ನು ಈವರೆಗೂ ಬಳಕೆಯಲ್ಲಿದ್ದ ಭಾರತೀಯ ದಂಡ ಸಂಹಿತೆ-1860(ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ-1973 (ಸಿಆರ್ ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ-1872(ಐಇಎ) ಕಾಯ್ದೆಗಳಿಗೆ ಬದಲಿಯಾಗಿ ಜಾರಿಗೆ ತರಲಾಗುತ್ತಿದೆ.
ಹೊಸ ಕಾಯ್ದೆಗಳ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಳೆದ ಎರಡು ತಿಂಗಳಿಂದ ಕೇಂದ್ರ ಸರಕಾರದಿಂದ ಪ್ರಯತ್ನಗಳು ನಡೆದಿವೆ.
ದೆಹಲಿ, ಕೋಲ್ಕತ್ತ, ಗುವಾಹಟಿ ಮತ್ತು ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆಯಲ್ಲಿ ಸಂಬಂಧಿಸಿದ ಇಲಾಖೆಗಳು, ನ್ಯಾಯಾಂಗ ಇಲಾಖೆಯವರು, ಕಾಯ್ದೆಜಾರಿ ಸಂಸ್ಥೆಗಳು, ಸರಕಾರಿ ವಕೀಲರು, ಜಿಲ್ಲಾಡಳಿತದ ಅಧಿಕಾರಿಗಳು, ಶಿಕ್ಷಣ ಕ್ಷೇತ್ರದ ತಜ್ಞರು, ಕಾನೂನು ವಿದ್ಯಾರ್ಥಿಗಳನ್ನು ಒಳಗೊಂಡಂತೆ ಕೇಂದ್ರದ ಕಾನೂನು ವ್ಯವಹಾರಗಳ ಇಲಾಖೆ ಕಾರ್ಯಾಗಾರಗಳನ್ನೂ ನಡೆಸಿದೆ.
ನಡೆದಿರುವ ಅಪರಾಧದ ಬಗ್ಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದು, ಆನ್‌ಲೈನ್ ಮೂಲಕ ದೂರು ಸಲ್ಲಿಕೆಗೆ ಅವಕಾಶ, ಹೇಯ ಅಪರಾಧ ನಡೆದಾಗ ಆ ಸ್ಥಳವನ್ನು ಚಿತ್ರೀಕರಿಸುವುದನ್ನು ಕಡ್ಡಾಯಗೊಳಿಸಿರುವುದು ಜುಲೈ 1ರಿಂದ ಜಾರಿಗೆ ಬರಲಿರುವ ಕ್ರಿಮಿನಲ್ ಅಪರಾಧ ಕಾನೂನುಗಳಲ್ಲಿ ಇರುವ ಪ್ರಮುಖ ಅಂಶಗಳು.
ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಈ ಮೂರು ಕಾನೂನುಗಳು ಎಲ್ಲರಿಗೂ ದಕ್ಷವಾಗಿ ನ್ಯಾಯ ಒದಗಿಸುವ ವ್ಯವಸ್ಥೆಯನ್ನು ರೂಪಿಸುವಲ್ಲಿ ಇರಿಸಿರುವ ಗಮನಾರ್ಹ ಹೆಜ್ಜೆ ಇದಾಗಿದೆ.
ಬ್ರಿಟಿಷ್ ಕಾಲದಲ್ಲಿ ರೂಪುಗೊಂಡ ಭಾರತೀಯ ದಂಡ ಸಂಹಿತೆ, ಅಪರಾಧ ದಂಡಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಜಾರಿಗೆ ಬರಲಿವೆ. ಹೊಸ ಕಾನೂನುಗಳ ಪ್ರಚಾರಕ್ಕಾಗಿ ಲಕ್ಷಾಂತರ ಕಾರ್ಯಕರ್ತರು, 5.65 ಪೊಲೀಸ್ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿದೆ.
ಹೊಸ ಕಾನೂನುಗಳ ಪ್ರಕಾರ ನಡೆಯುವ ತನಿಖೆ, ವಿಚಾರಣೆಗಳು, ನ್ಯಾಯಾಲಯಗಳ ಸಮನ್ಸ್ ಗಳ ವಿಡಿಯೋ ಮತ್ತು ಫೋಟೋಗ್ರಫಿಗಳನ್ನು ಸರಳವಾಗಿ ಪಡೆದುಕೊಳ್ಳಲು ರಾಷ್ಟ್ರೀಯ ಮಾಹಿತಿ ಕೇಂದ್ರವು (ಎನ್ಐಸಿ) eSakshya, NyayShruti ಮತ್ತು eSummon ಆ್ಯಪ್ಗಳನ್ನು ಅಭಿವೃದ್ಧಿಪಡಿಸಿದೆ.
ಹೊಸ ಕಾನೂನಿನ ಪ್ರಕಾರ ಯಾವುದೇ ವ್ಯಕ್ತಿಯು ದೈಹಿಕವಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡುವ ಅಗತ್ಯವಿಲ್ಲ. ತಾಂತ್ರಿಕ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಮೂಲಕವೇ ಈಗ ದೂರು ನೀಡಲು ಅವಕಾಶವಿದ್ದು, ಮಾಹಿತಿಯನ್ನು ದಾಖಲಿಸಿದ ಎರಡು ತಿಂಗಳೊಳಗೆ ಸಮಯೋಚಿತವಾಗಿ ತನಿಖೆ ಪೂರ್ಣಗೊಳಿಸುವುದನ್ನು ಖಚಿತಪಡಿಸುತ್ತದೆ.
ಮೂರು ಹೊಸ ಕ್ರಿಮಿನಲ್ ಕಾನೂನುಗಳು – ಭಾರತೀಯ ನ್ಯಾಯ ಸಂಹಿತಾ (BNS), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS), ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ (BSA) – 1ನೇ ಜುಲೈ 2024 ರಿಂದ ಜಾರಿಗೆ ಬರಲಿದೆ ಎಂದು ಸರ್ಕಾರ ದೃಢಪಡಿಸಿದೆ.
ಈ ಕಾನೂನುಗಳು ಹಳೆಯ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಕೂಲಂಕಷವಾಗಿ ಬದಲಾಯಿಸುತ್ತವೆ. ವಿಳಂಬಕ್ಕೆ ಹಲವಾರು ಮನವಿಗಳ ಹೊರತಾಗಿಯೂ, ಅನುಷ್ಠಾನವು ಯೋಜಿಸಿದಂತೆ ಮುಂದುವರಿಯುತ್ತಿದೆ.