ಉತ್ತರ ಪ್ರದೇಶ : ಹತ್ರಾಸ್ನ ರತಿಭಾನ್ಪುರದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಲೇ ಇದ್ದು ಇದುವರೆಗೂ 27 ಜನರು ಸಾವನಪ್ಪಿದ್ದಾರೆ.
ಇನ್ನು ಈ ದುರಂತದಲ್ಲಿ 15 ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಮಹಿಳೆ ಮತ್ತು ಮಕ್ಕಳನ್ನು ಇಟಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಬೋಲೆ ಬಾಬಾ ಇವರ ಸತ್ಸಂಗ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ.
ನಂತರ ಮುಕ್ತಾಯದ ಸಮಯದಲ್ಲಿ ಕಾಲ್ತುಳಿತ ಉಂಟಾಯಿತು, ಈ ಘಟನೆಯಲ್ಲಿ 27 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಇಟಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.