ಕೋಲಾರ : ರಾಜ್ಯದಲ್ಲಿ ಅತಿ ಹೆಚ್ಚು ಹೆಣ್ಣು ಮಕ್ಕಳು ಅಪ್ರಾಪ್ತ ವಯಸ್ಸಿನಲ್ಲಿ ಹೆಚ್ಚು ಕೃತ್ಯಗಳು ನಡೆಯುತ್ತಿವೆ ಇದರ ಬೆನ್ನಿನಲ್ಲಿ ಅಪ್ರಾಪ್ತಿಯೊಬ್ಬಳು ಕಾಲೇಜಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ವರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ಪ್ರಥಮ ಪಿಯುಸಿ ವಿದ್ಯಾರ್ಥಿ ಕಾಲೇಜು ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ ಈ ಸಂಬಂಧಕ್ಕೆ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಪೊಲೀಸರು ಬಾಲಕಿ ಸ್ಥಿತಿಗೆ ಕಾರಣವಾದ ಭೂಪನಿಗೆ ಹುಡುಕಾಟ ನಡೆಸಿದ್ದಾರೆ.
ಪೊಲೀಸರಿಗೆ ಸಿಕ್ಕ ಪ್ರಾಥಮಿಕ ಮಾಹಿತಿಯ ಪ್ರಕಾರ ಬಾಲಕಿಯು ಯುವಕನೊಂದಿಗೆ ಪ್ರೀತಿಯಲ್ಲಿದ್ದಳು ಆದರೆ ಆತ ಅದೇ ಕಾಲೇಜಿನ ಯುವಕ ಅಥವಾ ಹೊರಗಿನವನಾ ಎಂಬುವುದು ಸದ್ಯಕ್ಕೆ ತಿಳಿದು ಬಂದಿಲ್ಲ ಬಾಲಕಿ ಈ ಸ್ಥಿತಿ ಗೆ ಕಾರಣವಾದ ಯುವಕನಿಗೆ ಹುಡುಕಾಟ ನಡೆಸಿದ್ದಾರೆ.
ಮಂಗಳವಾರ ಶೌಚಾಲಯಕ್ಕೆ ತೆರಳಿದಾಗ ಬಾಲಕಿ ಅಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಬಾಲಕಿಯನ್ನು ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಇಷ್ಟು ದಿನ ಯಾರಿಗೂ ಗೊತ್ತಿರಲಿಲ್ಲವೇ ಅಥವಾ ಸ್ನೇಹಿತರಿಗೆ ಗೊತ್ತಿದ್ದು ವಿಚಾರ ಮುಚ್ಚಿಟ್ಟಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ ಪೊಲೀಸರು ಈ ಪ್ರಕರಣಕ್ಕೆ ಸಾಕ್ಷಿಷಾಧಾರ ಕಲೆ ಹಾಕುತ್ತಿದ್ದಾರೆ ಸದ್ಯದಲ್ಲೇ ಆರೋಪಿಯನ್ನು ಬಂಧಿಸಿ ಬಾಲಕಿಗೆ ಸೂಕ್ತ ನ್ಯಾಯ ಒದಗಿಸಲು ಪೊಲೀಸ್ ಇಲಾಖೆ ಮುಂದಾಗಿದೆ.