ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಕಾರಜೋಳ್ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನೆ ನಡೆಸಿ ಜಿಲ್ಲಾ ಆಡಳಿತ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಮೇಲೆ ಜಾತಿ ನಿಂದನೆ ಯಾದಾಗ ಕೇಸ್ ನೀಡದೆ ಹೊಂದಿಕೊಂಡು ಹೋಗಬೇಕು ಎಂದು ಹೇಳಿರುವ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದರು. ಎಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಪಾರ್ಲಿಮೆಂಟ್ ಗೆ ಪ್ರವೇಶಿಸಿರುವ ಗೋವಿಂದ ಕಾರಜೋಳ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತ ಕಾಯಲು ಬದ್ಧರಾಗಿರಬೇಕು ವಿನಃ ಮೇಲ್ಜಾತಿಯವರ ಓಲೈಕೆ ಮಾಡುವ ಕೆಲಸಕ್ಕೆ ಕೈ ಹಾಕಬಾರದು ಕೂಡಲೇ ದಲಿತರಲ್ಲಿ ಕ್ಷಮೆ ಕೇಳಿ ಸಂಸತ್ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರಾ ಹೋರಾಟ ನಡೆಸಲಾಗುವುದೆಂದು ಸಾಮಾಜಿಕ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕೆ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸ್ವತಂತ್ರ ಪೂರ್ವದಿಂದಲೂ ದಲಿತರ ಮೇಲೆ ನಿರಂತರ ದೌರ್ಜನ್ಯ ದಬ್ಬಾಳಿಕೆ ಅತ್ಯಾಚಾರ ಕೊಲೆಗಳು ನಡೆಯುತ್ತಿವೆ ಇದರಿಂದ ಇಂದಿನ ದಿನಮಾನಗಳಲ್ಲಿ ಗೋವಿಂದ ಕಾರಜೋಳ ಅವರು ದಲಿತ ವಿರೋಧಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವುದು ದಲಿತರ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತದೆ ನಿಲ್ಲಿಸಬೇಕು. ಇಲ್ಲವಾದಲ್ಲಿ ಘೇರಾವ್ ಹಾಕಲಾಗುವುದು ಎಂದರು.
ಪ್ರೊಫೆಸರ್ ಸಿ ಕೆ ಮಹೇಶ್, ನಿವೃತ್ತ ತಹಶೀಲ್ದಾರ ಮಲ್ಲಿಕಾರ್ಜುನ್, ಹಿರೇಹಳ್ಳಿ ಲೇಖಕ ಆನಂದಕುಮಾರ್, ಸಿ.ಎ ಚಿಕ್ಕಣ್ಣ ,ಎಂ ರಾಮಾಂಜನೇಯ, ಡಿ ದುರ್ಗೇಶಪ್ಪ, ಆರ್ ರಾಮಲಿಂಗಪ್ಪ ,ಜಯಪ್ಪ, ಆರ್ ಮೈಲೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಡಿ.ಡಿ.ಪಿ.ಐ.ಕೆ ರುದ್ರಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.