ಮಂಡ್ಯ ಸಂಸದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಭದ್ರಾವತಿಯ ವಿ.ಐ.ಎಸ್ಎಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೈಗಾರಿಕಾ ಪುನಶ್ಚೇತನ ಗೊಳಿಸಿ ಇದನ್ನು ನಂಬಿಕೊಂಡಿರುವ ಕಾರ್ಮಿಕರ ಕುಟುಂಬಗಳಿಗೆ ಆಧಾರವಾಗಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಇದೆ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿದರು.
ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಸೇರಿದಂತೆ ಅಧಿಕಾರಿಗಳ ಜೊತೆ ಎಚ್ ಡಿ ಕುಮಾರಸ್ವಾಮಿ ಸಭೆಯನ್ನು ನಡೆಸಿ ಸ್ಥಳೀಯ ಜನರು ಕಾರ್ಮಿಕ ಅಹವಾಲು ಆಲಿಸಿದರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತ್ಮ ನಿರ್ಧಾರ ಪರಿಕಲ್ಪನೆ ದೇಣಿಗೆಯ ಕೈಗಾರಿಕಾ ವಲಯಕ್ಕೆ ಸಂಜೀವಿಯಾಗಿದೆ ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತಿದ್ದೇವೆ ಎಂದು ತಿಳಿಸಿದರು.
ಎಚ್ ಡಿ ಕುಮಾರಸ್ವಾಮಿ ಕಾರ್ಮಿಕರ ಜೊತೆ ಮಾತನಾಡಿ ಕಾರ್ಖಾನೆ ಉಳಿಯಬೇಕು ಇದುರೊಂದಿಗೆ ಇತಿಹಾಸ ಗತವೈಭವ ಮರಳಿ ದೊರಕಿಸಿ ಕೊಡಬೇಕು ಕಾರ್ಖಾನೆ ಅವಲಂಬಿತ ಸಾವಿರಾರು ಕುಟುಂಬಗಳಿಗೆ ಉತ್ತಮ ರೀತಿಯ ಜೀವನ ಉಪಾಯವನ್ನು ಒದಗಿಸಬೇಕು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದು ನನಗೆ ಸ್ವಲ್ಪ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿದರು.
ವಿ.ಐ.ಎಸ್.ಎಲ್ ಕಾರ್ಖಾನೆಗೆ ಅಗತ್ಯ ಬಂಡವಾಳ ಹೂಡಿಕೆ ಹಾಗೂ ಕಾರ್ಖಾನೆ ಪುನಃ ಚೇತನಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ ಸಂಸದ ಬಿ ವೈ ರಾಘವೇಂದ್ರ ಹಾಗೂ ಜಿಲ್ಲೆಯಲ್ಲಿರುವ ಎಲ್ಲಾ ಜನಪ್ರತಿನಿಧಿಗಳ ಸಾಕಾರದೊಂದಿಗೆ ಕಾರ್ಖಾನೆ ಉಳಿಸಲಾಗುವುದೆಂದು ಕುಮಾರಸ್ವಾಮಿ ಭರವಸೆ ನೀಡಿದರು.
ಭದ್ರಾವತಿಯ ವಿಐಎಸ್ಎಲ್ ಗೆ ಭೇಟಿ ನೀಡಿದ ಬಳಿಕ ಎಚ್ ಡಿ ಕುಮಾರಸ್ವಾಮಿ ಶಿವಮೊಗ್ಗದ ಮಾಜಿ ಮುಖ್ಯಮಂತ್ರಿಗಳು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಈ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಸಂಸದ ಬಿ ವೈ ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.