Breaking
Tue. Dec 24th, 2024

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒ ಅವರೊಂದಿಗೆ ಜಿಲ್ಲಾ ಮಟ್ಟದ ವಿವಿಧ ಭಾವಿ ಸಭೆ….!

ಚಿತ್ರದುರ್ಗ : ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಚಿತ್ರದುರ್ಗವು ದಿನಾಂಕ 8 ಮತ್ತು 9 ರಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒ ಅವರೊಂದಿಗೆ ಜಿಲ್ಲಾ ಮಟ್ಟದ ವಿವಿಧ ಭಾವಿ ಸಭೆಯನ್ನು ನಡೆಸಲಾಯಿತು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಜಿಲ್ಲೆಯ ಕುಡಿಯುವ ನೀರಿನ ಮತ್ತು ಶುದ್ಧ ಕುಡಿಯುವ ನೀರು ಘಟಕಗಳನ್ನು ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಚಿತ್ರದುರ್ಗದ ಜನತೆಗೆ ಶುದ್ಧ ಕುಡಿಯುವ ನೀರಿನ ಅವ್ಯವಹಾರ, ಎಲ್ಲಡೆ ಕಾಣದಂತೆ ಇದನ್ನು ತಡೆಗಟ್ಟಿ ಜಿಲ್ಲೆಯ ಜನತೆಗೆ ಯೋಗ್ಯವಾದ ಮತ್ತು ಗುಣಮಟ್ಟದ ನೀರನ್ನು ಕೊಡುವಂತೆ ಕ್ರಮ ವಹಿಸಲಾಗುತ್ತಿದೆ. ಇದು ಜಿಲ್ಲೆಯಲ್ಲಿ ಅಲ್ಲದೆ ಗ್ರಾಮಗಳಲ್ಲಿಯೂ ಮತ್ತು ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಸೌಲಭ್ಯವನ್ನು ಹೊಂದಿದೆ. ಪ್ರಸ್ತುತ ಗ್ರಾಮೀಣ ಶಿಕ್ಷಣದ ಜಿಲ್ಲೆ ಸ್ಥಳೀಯ ನಗರ ಸಂಸ್ಥೆಗಳು ಮತ್ತು ಪ್ರದೇಶಗಳಲ್ಲಿ ಎಷ್ಟು ಪ್ರಮಾಣ ಕುಡಿಯುವ ನೀರಿನ ಪೂರೈಕೆಯಾಗಬೇಕೆಂದು ವರದಿ ಸಲ್ಲಿಸಲಾಗಿದೆ. 

ನೀರಿನ ಪರೀಕ್ಷೆ ನಡೆಸಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಕವಾಡಿಗರ ಹಟ್ಟಿಯಲ್ಲಿ ಸಂಭವಿಸಿದ ಹಾಗೆ ಕಲುಷಿತ ನೀರು ಸೇವನೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ.

ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದ ವೈದ್ಯಕೀಯ ವೆಚ್ಚವನ್ನು ಭರಿಸುವ ಸೌಲಭ್ಯವನ್ನು ವಿಶ್ವದಾದ್ಯಂತ ಹೆಚ್ಚು ನೋಂದಣಿ ಮಾಡುವಂತೆ ಕ್ರಮ ವಹಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ.ಪಿ ರೇಣುಪ್ರಸಾದ್ ರವರಿಗೆ ಸೂಚನೆ.

ಜಿಲ್ಲೆಯಲ್ಲಿ 18 ಲಕ್ಷ ಜನಸಂಖ್ಯೆ ಇದ್ದು, ಸಿ ಎಸ್ ಸಿ ಹಾಗೂ ನಾಡ ಕಚೇರಿಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ನೋಂದಣಿಗೆ ಕ್ರಮವಹಿಸಲಾಗಿದೆ . ಜಿಲ್ಲಾ ಆರೋಗ್ಯ ಅಧಿಕಾರಿ ಡಾಕ್ಟರ್ ಜಿ.ಪಿ ರೇಣುಪ್ರಸಾದ್ ಅವರು ಮಾತನಾಡಿ ಬಿಪಿಎಲ್ ಕಾರ್ಡುದಾರರಿಗೆ ಯೋಜನೆ ಅಡಿ ಜಿಲ್ಲೆಯಲ್ಲಿ 14.97 ಲಕ್ಷ ನಿಗದಿಪಡಿಸಲಾಗಿದೆ, ಇದುವರೆಗೂ 5.97 ಲಕ್ಷ ನೋಂದಣಿ ಶೇಕಡ 40ರಷ್ಟು ಪ್ರಗತಿ ಸಾಧಿಸಲಿದೆ. ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಪ್ರಸ್ತುತ ಶಿಕ್ಷಣ ಪಡೆದ ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿಗಳ ಶಿಕ್ಷಣ ಇಲಾಖೆಗೆ ಸೂಚನೆ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಮೊಬೈಲ್‌ನಲ್ಲಿ ತಿಳಿಸಲಾಗಿದೆ ಶಿಕ್ಷಕರಿಗೆ ಉತ್ತಮ ಬೋಧನಾ ವಿಧಾನಗಳನ್ನು ಅಳವಡಿಸಿ ಬೋಧನೆ ಮಾಡಬೇಕು.

ಜಿಲ್ಲಾ ಸರ್ಕಾರವು ಮಹತ್ವದ ಐಧು ಗ್ಯಾರಂಟಿ ಯೋಜನೆಗಳನ್ನು ಶೇಕಡ 100ರಷ್ಟು ಅನುಷ್ಠಾನಗೊಳಿಸಬೇಕು ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಎದುರಿಸುವ ಇ-ಕೆ ವೈ ಸಿ ಸೇರಿದಂತೆ ಇತರ ಕೆಲವು ತಾಂತ್ರಿಕ ದೋಷಗಳನ್ನು ಶೀಘ್ರವಾಗಿ ಪರಿಹರಿಸಲು ಅಪಾರ ಜಿಲ್ಲಾಧಿಕಾರಿ ಬಿ.ಟಿ.

ರಾಜ್ಯ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಭಾಗ್ಯ, ಗೃಹ ಹಾಗೂ ಯುವ ನಿಧಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಅರ್ಹ ಫಲಾನುಭವಿಗಳಿಗೆ ನೀಡಬೇಕಾದ ಸಲಹೆ ಸೂಚನೆಗಳು. ಗಂಗಾ ಯೋಜನೆ, ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕವನ್ನು ವಹಿಸಿಕೊಡಲು ರೈತರಿಗೆ ಬೆಸ್ಕಾಂ   ಅಧಿಕಾರಿಗಳಿಗೆ ಸಂಪರ್ಕ ಕಲ್ಪಿಸಲಾಗಿದೆ.

ಚಿತ್ರದುರ್ಗಕ್ಕಾಗಿ ಅಂಬೇಡ್ಕರ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಡಿ ದೇವರಾಜ ಅರಸು ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಅಭಿವೃದ್ದಿ ನಿಗಮಗಳ ಗಂಗಾ ಕಲ್ಯಾಣ ಯೋಜನೆ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಬಾಕಿ ಇರುವ ಅರ್ಜಿಗಳ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಶೀಘ್ರವೇ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ವಹಿಸುವಂತೆ ಸೂಚಿಸಿದರು.

ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಎಲ್ಲಾ ಶಾಲೆ ಅಂಗನವಾಡಿ ಹಾಗೂ ವಸತಿ ನಿಲಯಗಳಿಗೆ ಕುಡಿಯುವ ನೀರು ಸಂಪರ್ಕ ಕಲ್ಪಿಸಲು ಸೂಚಿಸಿದರು ಸಭೆಯಲ್ಲಿ ಜಲ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಜೆ ಸೋಮಶೇಖರ್ ಅಪರ ಜಿಲ್ಲಾಧಿಕಾರಿ ಭೇಟಿ ಕುಮಾರಸ್ವಾಮಿ ಉಪವಿಭಾಗಾಧಿಕಾರಿ ಎಂ. ಕಾರ್ತಿಕ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *