Breaking
Tue. Dec 24th, 2024

ನಗರ ಸಭೆ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ….!

ಚಿತ್ರದುರ್ಗ : ನಗರಸಭೆ ವ್ಯಾಪ್ತಿಗೆ ಬರುವ ಕಂದಾಯವನ್ನು  2024 2025 ನೇ ಸಾಲಿಗೆ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಇದೇ  ಏಪ್ರಿಲ್ ತಿಂಗಳಲ್ಲಿ ಪಾವತಿಸಿದವರಿಗೆ ಸರ್ಕಾರದ ಆದೇಶದ ಅನ್ವಯ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದೆಂದು ಜುಲೈ 31 ರವರೆಗೆ ಅವಧಿ ವಿಸ್ತರಿಸಲಾಗಿತ್ತು.

ನಗರಸಭೆ ಪೌರಾಯುಕ್ತೆ ರೇಣುಕಾ ಅವರು ತಿಳಿಸಿದ್ದಾರೆ.  ಈ ಪ್ರಯುಕ್ತ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರು ತಮ್ಮ ಆಸ್ತಿಗಳಿಗೆ ಜುಲೈ 31ರೊಳಗೆ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಿ ಶೇಕಡ ಐದರಷ್ಟು ರಿಯಾಯಿತಿ ಅವಕಾಶವನ್ನು ಉಪಯೋಗ ಪಡೆದುಕೊಳ್ಳಬಹುದಾಗಿದೆ.

ಈಗಾಗಲೇ 2024 25 ನೇ ಸಾಲಿನ ಮೇ ಮತ್ತು ಜೂನ್ ಮಾಹೆಯಲ್ಲಿ ಶೇಕಡ ಐದರಷ್ಟು ರಿಯಾಯಿತಿ ಪಡೆಯದೆ ಸಂಪೂರ್ಣ ಪ್ರಮಾಣದಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿರುವ ಆಸ್ತಿ ಮಾಲೀಕರು ಚಲನ್ ಮತ್ತು ವಿವರದ ಪಟ್ಟಿ ತೋರಿಸಿ ಮುಂದಿನ  ಆರ್ಥಿಕ ವರ್ಷದಲ್ಲಿ ಅಂದರೆ 2025 26ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವ ಸಂದರ್ಭದಲ್ಲಿ ಶೇಕಡ 5 ರಷ್ಟು ರಿಯಾಯಿತಿ ಪಡೆಯಬಹುದೆಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತ ಎಂ ರೇಣುಕಾ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *