ರಾಯಚೂರು : ಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿಯವರ ಮಠಕ್ಕೆ ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದ ದರೋಡೆಕೋರರು ಸ್ವಾಮೀಜಿ ಹಣೆಗೆ ಗನ್ ಇಟ್ಟು ದರೋಡೆ ಮಾಡಿದ ಘಟನೆ ರಾಯಚೂರಿನ ಲಿಂಗಸಗೂರಿನ ವಿಜಯ ಮಹಂತೇಶ್ವರ ಶಾಖಾ ಮಠದಲ್ಲಿ ನಡೆದಿದೆ.
ಗುರುವಾರ ತಡರಾತ್ರಿ ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದ ದುಷ್ಕರ್ಮಿಗಳು ನಾವು ಗುಲ್ಬರ್ಗದಿಂದ ಬಂದಿದ್ದೇವೆ ಹಾಗೂ ಮಠದ ಭಕ್ತರು ಎಂದು ಹೇಳಿಕೊಂಡು ಬಂದಿದ್ದ ದುಷ್ಕರ್ಮಿಗಳು ಮಲಗಿದ್ದ ಸ್ವಾಮೀಜಿಯನ್ನು ಎಬ್ಬಿಸಿ, ಆತ್ಮರಕ್ಷಣೆಗಾಗಿ ತಮ್ಮ ಬಳಿ ಇರಿಸಿಕೊಂಡು ಬಂದಿದ್ದರು.
ಮಠದಲ್ಲಿದ್ದ 80 ಗ್ರಾಂ ಚಿನ್ನ, 7 ಕೆಜಿ ಬೆಳ್ಳಿ ಆಭರಣಗಳು ಮತ್ತು 20 ಲಕ್ಷ ಆಭರಣಗಳು ಸೇರಿದಂತೆ 35 ಲಕ್ಷ ಮೌಲ್ಯದ ವಸ್ತುಗಳನ್ನು ದರೋಡೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠ ಅಧಿಕಾರಿ ಮಠಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು ಹಾಗೂ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.