ಬೆಂಗಳೂರು : ರಾಜ್ಯ ಸರ್ಕಾರವು ಇತ್ತೀಚೆಗೆ ಮಹತ್ವದ ಆದೇಶವನ್ನು ಹೊರಡಿಸಿದೆ. ಆಗಸ್ಟ್ 15 ರಂದು ಸ್ವಾತಂತ್ರ ದಿನಾಚರಣೆ ಮತ್ತು ನವೆಂಬರ್ 26 ರಂದು ಸಂವಿಧಾನ ದಿನಾಚರಣೆಯ ದಿನದಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕೆಂದು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯಕುಮಾರ್ ಎಚ್.ಬಿ. ಸುತ್ತೋಲೆ ಹೊರಡಿಸಲಾಗಿದೆ. ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಅಂಬೇಡ್ಕರ್ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕೆಂದು ಸೂಚನೆ ನೀಡಲಾಗಿದೆ.
ಜನವರಿ 26 ಗಣರಾಜ್ಯೋತ್ಸವ ದಿನಾಚರಣೆಯ ದಿನದಂದು ಅಂಬೇಡ್ಕರ್ ಭಾವಚಿತ್ರವನ್ನು ಮಾತ್ರ ಬಳಸದೆ, ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಸರ್ಕಾರಿ ಸಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳು ಸೇರಿದಂತೆ ಸರ್ಕಾರದ ವತಿಯಿಂದ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು.
ಇದೇ ರೀತಿ ನವಂಬರ್ 26 ರಂದು ಸಂವಿಧಾನದ ಆಚರಣೆ ಸಂದರ್ಭದಲ್ಲಿ ಕೂಡ ಎಲ್ಲಾ ಸರ್ಕಾರಿ ಸಂಸ್ಥೆಗಳು ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದರು.