ಬೆಂಗಳೂರು : ಮದರ್ ತೆರೇಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಬೆಂಗಳೂರಿನ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನರ್ಸಿಂಗ್ ವಿದ್ಯಾರ್ಥಿನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಸಂಖ್ಯೆ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ದಿಯಾ ಬೆಂಗಳೂರಿನ ಹಾಸ್ಟೆಲ್ ಒಂದರಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.