ಚಿತ್ರದುರ್ಗ : ನಗರದಲ್ಲಿ ಸಾರ್ವಜನಿಕರು ಮೊಬೈಲ್‌ಗಳನ್ನು ಕಳೆದುಕೊಂಡು ಅಥವಾ ಯಾರಾದರೂ ಕಳವು ಮಾಡಿದರೆ ಈ ಲಾಸ್ಟ್ ಅಥವಾ ಸಿ.ಇ.ಐ.ಆರ್ ಪೋರ್ಟಲ್ ನಲ್ಲಿ ದೂರು ದಾಖಲಿಸಿದರೆ ಪತ್ತೆ ಹಚ್ಚಿ ಹಿಂತಿರುಗಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನ್ ಅವರು ತಿಳಿಸಿದರು.
ಚಿತ್ರದುರ್ಗ ನಗರದ ಜಿಲ್ಲಾ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಾಪರ್ಟಿ ರಿಟರ್ನ್ ಪರೇಡ್ ಕಾರ್ಯಕ್ರಮದಲ್ಲಿ ವಾರಸುದಾರರಿಗೆ ತಮ್ಮ ಮೊಬೈಲ್ ಫೋನ್ ಗಳನ್ನು ಹಿಂತಿರುಗಿಸಿದರು. ಜಿಲ್ಲೆಯಲ್ಲಿ ಒಟ್ಟು 8 ಲಕ್ಷ ರೂಪಾಯಿ ಮತದ ಒಟ್ಟು 80 ಮೊಬೈಲ್ ಗಳನ್ನು ಸಾರ್ವಜನಿಕರು ಕಳೆದುಕೊಂಡಿರುತ್ತಾರೆ.
ಈ ಕುರಿತು ಈ ಲಾಸ್ಟ್ ಮತ್ತು ಟೋಟಲ್ ನಲ್ಲಿ ದೂರು ದಾಖಲಿಸಿದರು ಅವುಗಳನ್ನು ಪತ್ತೆ ಹಚ್ಚಿ ಬಾರಸುದಾರರಿಗೆ ಹಿಂತಿರುಗಿಸುವ ಕಾರ್ಯಕ್ರಮವನ್ನು ಇಂದು ಪೊಲೀಸ್ ವರಿಷ್ಠ ಅಧಿಕಾರಿಗಳು ಧರ್ಮೇಂದ್ರ ಕುಮಾರ್ ಮೀನಾ ಅವರು ಹಾಗೂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಾರ್ವಜನಿಕರಿಗೆ ಮೊಬೈಲನ್ನು ಹಿಂದಿರುಗಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಚಿತ್ರದುರ್ಗ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪೊಲೀಸರು ತಂತ್ರಾಂಶದ ಸಹಾಯದಿಂದ ಅಂದಾಜು ಮೌಲ್ಯ 8 ಲಕ್ಷ ರೂಪಾಯಿ ಬೆಲೆಬಾಳುವ 80 ವಿವಿಧ ಕಂಪನಿಗಳ ಮೊಬೈಲ್ ಫೋನ್ ಗಳನ್ನು ಕರ್ನಾಟಕ, ಆಂಧ್ರಪ್ರದೇಶ, ಕೇರಳ, ಗೋವಾ ಸೇರಿದಂತೆ ವಿವಿಧ ರಾಜ್ಯಗಳಿಂದ ಪತ್ತೆ ಹಚ್ಚಿದರು.
ಪೋಲಿಸರು ಮೊಬೈಲ್ ಫೋನ್ ಪತ್ತೆಗೆ ಶ್ರಮಿಸಿದ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಎನ್ ವೆಂಕಟೇಶ್, ಭೀಮನಗೌಡ ಪಾಟೀಲ್ ಮತ್ತು ತಂಡದವರು ಯಶಸ್ವಿ ಕಾರ್ಯಚರಣೆಗೆ ಶ್ಲಾಘನೀಯ ವ್ಯಕ್ತಪಡಿಸಿದರು.