Breaking
Wed. Dec 25th, 2024

ನಗರದ ಭದ್ರಾ ಮೇಲ್ದಂಡೆ ಯೋಜನೆ ಕಚೇರಿಯಲ್ಲಿ ಯೋಜನೆಯ ಪ್ರಗತಿ ಪರಿಶೀಲನ ಸಭೆ….!

ಚಿತ್ರದುರ್ಗ : ಜಿಲ್ಲೆಯಲ್ಲಿ ಹೆಚ್ಚು ಬರಪೀಡಿತವಾದ  ಜಿಲ್ಲೆಯಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ ವರದಾನವಾಗಿದೆ. ಯೋಜನೆ ಪೂರ್ಣಗೊಳಿಸಲು ಅಗತ್ಯ ಇರುವ ರೈತರು ಜಾಮೀನು ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವುದರ ಮೂಲಕ ಸಂಸದ ಗೋವಿಂದ ಕಾರಜೋಳ್ ತಿಳಿಸಿದರು. ನಗರದ ಭದ್ರಾ ಮೇಲ್ದಂಡೆ ಯೋಜನೆ ಕಚೇರಿಯಲ್ಲಿ ಯೋಜನೆಯ ಪ್ರಗತಿ ಪರಿಶೀಲನ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿಕ್ಕಮಂಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಿಗೆ ನೀರಾವರಿ ಸೌಲಭ್ಯ ದೊರೆಯುವುದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗುತ್ತದೆ. ಯೋಜನೆಯನ್ನು ಆದಷ್ಟು ವೇಗವಾಗಿ ಪೂರ್ಣಗೊಳಿಸಬೇಕು ಎಂಬುದು ನಮ್ಮ ಆಸೆ ಯೋಜನೆ ಪೂರ್ಣಗೊಳಿಸದೆ ಚಿತ್ರದುರ್ಗ ಜಿಲ್ಲೆಗೆ ಬರಬೇಡಿ ಹಳೆಸಲು ಆಗುವುದಿಲ್ಲ ಯೋಜನೆ ಅನುಷ್ಠಾನವಾಗಿ ಭೂಸ್ವಾಧೀನ ಅಧಿಕಾರಿಗಳಿಗಿಂದ ವಿವಿಧ ಇಲಾಖೆ ಅಧಿಕಾರಿಗಳು ರಾಜ್ಯ ಹಾಗೂ ಕೇಂದ್ರ ಸಚಿವರಿಗೂ ಹಿಂಬಾಲು ಬಿದ್ದು ಯೋಜನೆ ಕಾರ್ಯ ಮುಂದುವರಿಸಲಾಗಿದೆ ಎಂದು ತಿಳಿಸಿದರು. 

2008 2009ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5900 ಕೋಟಿಗೆ ಅನುಮೋದನೆ ನೀಡಲಾಗುತ್ತಿತ್ತು. 2015ರಲ್ಲಿ ಯೋಜನೆಯ ವೆಚ್ಚವನ್ನು ರೂಪಾಯಿ 12 ಸಾವಿರ ಕೋಟಿ ಪರಿಷ್ಕಂತಗೊಳಿಸಲಾಯಿತು. ಅಂತಿಮವಾಗಿ 2020ರಲ್ಲಿ ಯೋಜನೆ ಪರಿಷ್ಕರಣೆ ವೆಚ್ಚ 21463 ಕೋಟಿಗೆ ಅನುಮೋದನೆ ನೀಡಿ ಸರ್ಕಾರ ಆದೇಶಿಸಿದೆ. ಸುಮಾರು ರೂ.10,000 ಕೋಟಿಯಷ್ಟು ಯೋಜನೆಗೆ ಮಾಡಲಾಗಿದೆ. ಇನ್ನು ರೂ.11500 ಕೋಟಿಯಷ್ಟು ಯೋಜನೆ ಕಾಮಗಾರಿ ಬಾಕಿ ಇದೆ ಭದ್ರ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿದ 53,00 ಕೋಟಿಯನ್ನು ಈ ಈ ಬಾರಿ ಬಜೆಟ್ಟಿನಲ್ಲಿ ಮಂಡಿಸಲಾಗುವುದಾಗಿ ಕೇಂದ್ರ ಸರ್ಕಾರದ ವಿತ್ತ ಸಚಿವರಾದ ನಿರ್ಮಲ ಸೀತಾರಾಮನ್ ಅವರು ಭರವಸೆ ನೀಡಿದರು.

ತಾಂತ್ರಿಕವಾಗಿ ಯೋಜನೆಯ ವಿವರವನ್ನು ರಾಜ್ಯ ಸರ್ಕಾರ ನೀಡಿದ ತಕ್ಷಣವೇ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು. ರಾಜ್ಯ ಸರ್ಕಾರ ಪುಸ್ತಕ ವರ್ಷದಲ್ಲಿ ರೂಂ.1400 ಕೋಟಿ ಯೋಜನೆಗೆ ನೀಡಿದೆ. ಗುತ್ತಿಗೆದಾರರ ಕಾರಣ ಯೋಜನೆ ನಿಧನ ಗತಿಯಲ್ಲಿ ಸಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ಬಳಿ ಯೋಜನೆಗೆ 3000 ಕೋಟಿ ಒದಗಿಸಲು ಕೇಳಿಕೊಂಡಿದ್ದೇನೆ.

ಯೋಜನೆ ಸುಗಮ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಗಮನಕ್ಕೆ ತಂದ ವಿಷಯಗಳ ಪರಿಹಾರಕ್ಕಾಗಿ ಚಿಕ್ಕಮಂಗಳೂರು ಜಿಲ್ಲಾಧಿಕಾರಿ ಭೂಸ್ವಾಧೀನ ಅಧಿಕಾರಿ ಅರಣ್ಯ ಇಲಾಖೆ ಸರ್ಕಾರದ ಅಪಾರ ಮುಖ್ಯ ಕಾರ್ಯದರ್ಶಿಗಳಿಗೆ ಕರೆ ಮಾಡಿ ಮಾತನಾಡಿ ಸಮಸ್ಯೆ ಬಗೆಹರಿಸುವದಾಗಿ ತಿಳಿಸಿದರು.

ಯೋಜನೆಗೆ ಅಗತ್ಯವಾದ 1700 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಉಳಿದಿದೆ ರೈತರು ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದ ಮರೆ ಹೋಗಿದ್ದಾರೆ ಇವುಗಳನ್ನು ತೆರೆವುಗೊಳಿಸಿ ಯೋಜನೆ ಅನುಷ್ಠಾನ ಮಾಡಲಾಗುವುದು ರೈತರು ಪರಿಹಾರ ಪಡೆಯಲು ನಿರಾಕರಿಸಿದ್ದಾರೆ ಆ ಹಣವನ್ನು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಇರಿಸಿ ಪೋಲಿಸ್ ರಕ್ಷಣೆ ಪಡೆಯ ಕಾಮಗಾರಿ ಮುಂದುವರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭೂಸ್ವಾಧೀನ ಕಾಯ್ದೆ ಅನುಸಾರ ಜಮೀನಿನ ನಾಲ್ಕು ಪಟ್ಟು ಹೆಚ್ಚಿನ ಪರಿಹಾರ ಹಣ ನೀಡಲು ಸಾಧ್ಯವಿದೆ ನಿಯಮನುಸಾರ ಪರಿಹಾರವನ್ನು ರೈತರು ಪಡೆದುಕೊಳ್ಳಬೇಕು ನ್ಯಾಯಾಲಯದ ಹೆಚ್ಚಿನ ಪರಿಹಾರ ನೀಡಲು ಆದೇಶಿಸಿದರೆ ಅದು ಕನುಗುಣವಾಗಿ ಪರಿಹಾರ ಹಣ ರಾಜ್ಯ ಸರ್ಕಾರ ನೀಡಲಿದೆ ಸದ್ಯ ನೀಡುವ ಪರಿಹಾರ ಪಡೆದು ಯೋಜನೆ ಅನುಷ್ಠಾನಕ್ಕೆ ಅನುವು ಮಾಡಿಕೊಡಬೇಕು ಎಂದು ರೈತ ಬಾಂಧವರಿಗೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಗೋವಿಂದ ಕಾರಜೋಳ್ ತಿಳಿಸಿದರು. ತುಂಬಾ ಜಲಾಶಯದ ಹಿನ್ನೀರು ಮುಳುಗಡೆ ಪ್ರದೇಶದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಟವರ್ ಗಳು ಹಾದು ಹೋಗಲಿವೆ. ಇದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರವೇ ಅನುಮತಿ ನೀಡುವುದಾಗಿ ಭರವಸೆ ನೀಡಿದರು.

ಈ ಕುರಿತು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಗೆ ಭದ್ರಾ ಮೇಲ್ದಂಡೆ  ಯೋಜನೆ ಪ್ರಗತಿ ಪರಿಶೀಲನೆಗಾಗಿ ಭದ್ರ ಮೇಲ್ದಂಡೆ ಯೋಜನೆ ಪ್ರಗತಿ ಪರಿಶೀಲನೆಗಾಗಿ ಎಲ್ಲಾ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ಕರೆಯುವಂತೆ ಸೂಚನೆ ತಿಳಿಸಿದ್ದೇನೆ ಎಂದು ಹೇಳಿದರು.

Related Post

Leave a Reply

Your email address will not be published. Required fields are marked *