ಚಿತ್ರದುರ್ಗ : ಚಿತ್ರದುರ್ಗದ ಹಿರಿಯ ಪತ್ರಕರ್ತರಾದ ಅಹೋಬಳಪತಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ನೂತನ ಸದಸ್ಯರಾಗಿ ನೇಮಕ ಮಾಡಲಾಯಿತು. ಇವರಿಗೆ ಕಾರ್ಯನಿರತ ಪತ್ರಕರ್ತ ಸಂಘ ಚಿತ್ರದುರ್ಗ ವತಿಯಿಂದ ಪತ್ರಿಕಾ ಭವನದಲ್ಲಿ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡಗೆರೆ ನಿವೃತ್ತ ಉಪನ್ಯಾಸಕರಾದ ನಟರಾಜ್ ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಶ.ಮಂಜುನಾಥ್, ನಾಕೀಕೆರೆ ತಿಪ್ಪೇಸ್ವಾಮಿ, ಹೆಂಜಾರಪ್ಪ, ರವಿ ಉಗ್ರಾಣ, ರವಿ ಮಲ್ಲಾಪುರ, ರಾಜು, ವೀರೇಶ್, ವಿನಾಯಕ, ಗೋವಿಂದಪ್ಪ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.