ದಾವಣಗೆರೆ : ಕೂಲಿ ಕಾರ್ಮಿಕ ಮಕ್ಕಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾರ್ಮಿಕ ಇಲಾಖೆ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಮುಂದುವರಿಸಲು ಹಾಗೂ ಅವರಿಗೆ ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ಕರ್ನಾಟಕ ಸರ್ಕಾರವು ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅಸಂಘಟಿತ ಕಾರ್ಮಿಕರ ಮಕ್ಕಳ ಶಿಕ್ಷಣಶಾಲೆ, ಸ್ನಾತಕೋತರ ಪದವಿ, ಹಾಗೂ ವೈದ್ಯಕೀಯ, ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವ 2024 25 ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನಕ್ಕಾಗಿ ಕಾರ್ಮಿಕ ಮಂಡಳಿಯ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಪ್ರೋತ್ಸಾಹಧನ ಬಯಸುವ ವಿದ್ಯಾರ್ಥಿಗಳು ಇಂದಿನ ಪದವಿ ಪಡೆದ ಸಾಮಾನ್ಯ ವರ್ಗ ಶೇಕಡ 50 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಶೇಕಡ 45ರಷ್ಟು ಅಂಕಗಳನ್ನು ಪಡೆಯಬೇಕು. ಕಾರ್ಮಿಕ ಇಲಾಖೆಯಲ್ಲಿ ಮಾಸಿಕ ವೇತನ 35,000 ಗಿಂತ ಮೇಲಿರಬಾರದು. ವಿದ್ಯಾರ್ಥಿಗಳು ಕಾರ್ಮಿಕ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2025 ಜನವರಿ 31 ರಂದು ಸಂಜೆ 5 ರಂದು ಸಲ್ಲಿಸಲು ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಪ್ರಾರಂಭಿಸಿದರು.