ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ ಪ್ರತಿಕ್ರಿಯೆ ನೀಡಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಅವರನ್ನು ಇಂದು ಬೆಳಗ್ಗೆ ಇ.ಡಿ ಕಚೇರಿಗೆ ಕರೆದೊಯ್ಯುವ ವೇಳೆಯಲ್ಲಿ ಮಾಧ್ಯಮಗಳಿಗೆ ನನಗೇನು ಗೊತ್ತಿಲ್ಲ ಎಂದಷ್ಟೇ ನಾಗೇಂದ್ರ ಪ್ರತಿಕ್ರಿಯೆಸಿದರು.
ಅಗರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳವರೆಗೆ ಜಾರಿ ನಿರ್ದೇಶನಾಲಯ ಶೋಧನೆ ನಡೆಸಿತು ಅಧಿಕಾರಿಗಳು ಬಸವನಗೌಡ ದದ್ದಲ್ ಅವರ ಮನೆ ಕಚೇರಿಯಲ್ಲಿನ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡರು.
ಈ ವೇಳೆ ನಾಗೇಂದ್ರ ಆಪ್ತ ಸಹಾಯಕ ಹರೀಶ್ ಅವರನ್ನು ಇ.ಡಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತು ನಂತರ ಅವರನ್ನು ವಾಪಸ್ ಕಳಿಸಲಾಯಿತು ಇತ್ತ ಬಸವನಗೌಡ ಅವರ ವಿಚಾರಣೆಯೂ ನಡೆಯಿತು.