ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯ ಆವರಣದಲ್ಲಿ ಭೂಕುಸಿತ ಸಂಭವಿಸಿದ್ದು ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಹಟ್ಟಿ ಚಿನ್ನದ ಗಣಿ ಕಂಪನಿಯ ಆವರಣದಲ್ಲಿ ಮಲ್ಲಪ್ಪ ಶಾಫ್ಟ್‌ನ ಭೂಮಿಯ ಕೆಳಮೈ ವಿಭಾಗದಲ್ಲಿ ಶುಕ್ರವಾರ ಬೆಳಗಿನ ಜಾವ 3.30ಕ್ಕೆ ಭೂಕುಸಿತವಾಗಿದೆ.
ಭೂಕುಸಿತದಲ್ಲಿ ಮೌನೇಶ ಸ್ಥಳದಲ್ಲೇ ಮೃತಪಟ್ಟ ಕಾರ್ಮಿಕ ಪ್ರಯಾಸಪಟ್ಟು ಮೌನೇಶ ಅವರ ಶವ ಹೊರ ತೆಗೆಯಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರಿಗೆ ಕಂಪನಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳಿಸಿಕೊಡಲಾಗಿದೆ.
ಮೃತರು ಸಂಬಂಧಿಕರು ಹಾಗೂ ಕಾರ್ಮಿಕರ ಮುಖಂಡರು ಮೃತನ ಕುಟುಂಬದವರಿಗೆ ಪರಿಹಾರ ಘೋಷಿಸುವವರೆಗೂ ಶವ ಪರೀಕ್ಷೆಗೆ ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ. ಹೀಗಾಗಿ ಕಂಪನಿಯ ಆವರಣದಲ್ಲಿ ತೈಷಮಯ ವಾತಾವರಣ ನಿರ್ಮಾಣವಾಗಿದೆ.
ಹಟ್ಟಿ ಚಿನ್ನದ ಗಣಿ ಕಂಪನಿಯ ಆಸ್ಪತ್ರೆಗೆ ಕಾರ್ಯ ನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ, ಅಧಿಕಾರಿಗಳು ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಈ ಘಟನೆಯನ್ನು ಖಂಡಿಸಿ ಸಿಐಟಿಯು ಹಾಗೂ ಎಸ್‌ಎಫ್‌ಐ ಪ್ರತಿಭಟನೆ ನಡೆಸುತ್ತಿದ್ದು ಕಂಪನಿಯ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.