ಚಿತ್ರದುರ್ಗ : ಪತ್ರಿಕೆ ಓದುವ ಹವ್ಯಾಸ ಜನಸಾಮಾನ್ಯರಲ್ಲಿ ಕಡಿಮೆಯಾಗುತ್ತಿದೆ ಟಿವಿ ಮಾಧ್ಯಮಗಳು ಹೆಚ್ಚಿನ ಪರಿಣಾಮ ಬೀರುವುದರಿಂದ ಪತ್ರಿಕೆಗಳು ಕ್ಷೀಣಿಸುವ ಹಾದಿ ಬಂದಿದೆ ಹಿಂದಿನ ಮಕ್ಕಳಿಗೆ ಟಿ.ವಿ ಮಾಧ್ಯಮಗಳೇ ಮೊದಲ ಪಾಠಶಾಲೆ ಎನ್ನುವಂತೆ ಮಾಧ್ಯಮಗಳು ಹೆಚ್ಚಿನ ಪ್ರಭಾವ ಬೀರುವ ಶಕ್ತಿ ಹೊಂದಿದ್ದು ಇದು ಸಮಾಜದ ಏಳಿಗೆಗೆ ಬಳಕೆಯಾಗಲಿದೆ ಎಂದು ಗೋವಿಂದ ಕಾರಜೋಳ್ ತಿಳಿಸಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ದ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಪತ್ರಿಕ ದಿನಾಚರಣೆಯಲ್ಲಿ ಭಾಗವಹಿಸಿ ಗೌರವಾನ್ವಿತ ಅತಿಥಿಗಳು ಭಾಗವಹಿಸಿದ್ದರು.
ಮುಂದುವರೆದು ಮಾತನಾಡಿ ಪತ್ರಿಕೆಗಳು ಸಮಾಜದ ಪ್ರತಿಬಿಂಬ ಹಾಗೂ ಪ್ರಜಾಪ್ರಭುತ್ವದ ರಕ್ಷಾ ಕವಚವಾಗಿ ಕಾರ್ಯ ನಿರ್ವಹಿಸುತ್ತೇವೆ ಸ್ವತಂತ್ರ ಹೋರಾಟದಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಕನ್ನಡ ನಾಡಿನ ಮೊದಲ ದಿನಪತ್ರಿಕೆ ಮಂಗಳೂರು ಸಮಾಚಾರ ಪತ್ರಿಕೆಯನ್ನು 1843 ಜುಲೈ 1ರಂದು ಪಾದ್ರಿ ಅರ್ಮನ್ ಮೊಗ್ಲಿಂಗ್ ಆರಂಭಿಸಿದರು ಗೋಪಾಲಕೃಷ್ಣ ಗೋಖಲೆ ಹಾಗೂ ಬಾಲಗಂಗಾಧರ್ ತಿಲಕ್ ಬ್ರಿಟಿಷರ ಆಡಳಿತ ಅವಧಿಯಲ್ಲಿ ಆಗುವ ಅನ್ಯಾಯಗಳನ್ನು ಜನರಿಗೆ ಬ್ರಿಟಿಷರು ಮಾಡುತ್ತಿರುವ ಶೋಷಣೆಯನ್ನು ವಿವರವಾಗಿ ಪತ್ರಿಕೆಗಳ ಮೂಲಕ ತಿಳಿಸುತ್ತಿದ್ದರು.
ಸ್ವತಂತ್ರ ಹೋರಾಟದಲ್ಲಿ ಧುಮುಕಿ ಮಹಾತ್ಮ ಗಾಂಧೀಜಿ ಯಂಗ್ ಇಂಡಿಯಾ ಹಾಗೂ ಹರಿಜನ ಎಂಬ ಪತ್ರಿಕೆಗಳನ್ನು ಆರಂಭಿಸುವ ಜೊತೆಗೆ ಪ್ರಾದೇಶಿಕ ಭಾಷೆಗಳಲ್ಲಿ ಪತ್ರಿಕೆಯನ್ನು ಆರಂಭಿಸಿದರು. ಅಂಬೇಡ್ಕರ್ ಸಹ ಮೂಕ ನಾಯಕ ಹಾಗೂ ಬಹಿಷ್ಕೃತ ಸಮಾಜ ಪತ್ರಿಕೆಗಳ ಮೂಲಕ ದಿನದಲಿತರನ್ನು ಸಂಘಟಿಸಿ ಅಭಿವೃದ್ಧಿ ಪತದ ಕಡೆಗೆ ಮುನ್ನಡೆಯುವಂತೆ ಮಾಡಿದರು.
ಸ್ವಾತಂತ್ರದ ನಂತರ ಮಾಜಿ ಪ್ರಧಾನಿ ನೆಹರು ಅವರ ಮೊದಲ ಸಚಿವ ಸಂಪುಟದಲ್ಲಿ ಖ್ಯಾತ ಪತ್ರಕರ್ತ ರಂಗರಾವ್ ದಿನಕರ್ ಸಹಿತ ಒಬ್ಬರಾಗಿದ್ದರು. ರಾಜ್ಯದಿಂದ ಸಂಸದರಾಗಿ ಆಯ್ಕೆಯಾಗಿದ್ದ ಪಾಟೀಲ್ ಪುಟ್ಟಪ್ಪನವರು ಸಹ ವಿಶ್ವವಾಣಿ ದಿನಪತ್ರಿಕೆ ಹಾಗೂ ಪ್ರಪಂಚ ಎನ್ನುವ ವಾರ ಪತ್ರಿಕೆಗಳ ಸಂಪಾದಕರಾಗಿ ಕಾರ್ಯ ನಿರ್ವಹಿಸಿದರು.