Breaking
Wed. Dec 25th, 2024

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತಿಯ ಮುಖ್ಯ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ….!

ಚಿತ್ರದುರ್ಗ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತಿಯ ಮುಖ್ಯ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್.

ಮಾಧ್ಯಮಗಳು ಜನರ ವಿಶ್ವಾಸಕ್ಕೆ ಹತ್ತಿರವಾಗಬೇಕು. ಜನರು ಮಾಧ್ಯಮಗಳನ್ನು ಅತಿ ಸೂಕ್ಷ್ಮವಾಗಿ ಗಮನಿಸುತ್ತಾರೆ. ಜನಸಾಮಾನ್ಯರಲ್ಲಿ ಇಂದು ಟಿವಿ ಹಾಗೂ ಪತ್ರಿಕೆ ಸುದ್ದಿಗಳನ್ನು ಅನುಮಾನದ ದೃಷ್ಟಿಯಿಂದ ನೋಡುವ ಪರಿಸ್ಥಿತಿ ಉಂಟಾಗಿದೆ.

ಮಾಧ್ಯಮಗಳಲ್ಲಿ ಪ್ರಕಟವಾಗುವ ಸುಳ್ಳು ಎನ್ನುವ ಭಾವನೆ ಜನರಲ್ಲಿ ಮೂಡುತ್ತಿರುವುದು ಆತಂಕಕಾರಿಯಾಗಿದೆ ಮುಖ್ಯ ವಾಹಿನಿಯ ಮಾಧ್ಯಮಗಳ ಜೊತೆಗೆ ಸಾಮಾಜಿಕ ಮಾಧ್ಯಮಗಳು ಯೂಟ್ಯೂಬ್ಗಳಲ್ಲಿ ಸುದ್ದಿಗಳ ಪ್ರಸಾರವಾಗುತ್ತಿದೆ ಇವು ಮುಖ್ಯ ವಾಹಿನಿಯ ಮಾಧ್ಯಮಗಳಿಗೆ ಸಮಾಂತರವಾಗಿ ಕಾರ್ಯಯನರ್ವಹಿಸುತ್ತವೆ ಬದಲಾಗಿ ಈ ಪರಿಸ್ಥಿತಿಯಿಂದ ಟಿವಿ ಹಾಗೂ ಪತ್ರಿಕಾ ಮಾಧ್ಯಮಗಳು ಹೊರ ಬರಬೇಕು. 

ವಸ್ತು ನಿಷ್ಠ ನಿಖರ ಹಾಗೂ ಸತ್ಯವಾದ ಸುದ್ದಿಗಳನ್ನು ಪ್ರಕಟಿಸುವ ಮೂಲಕ ಜನರ ನಂಬಿಕೆ ಗಳಿಸಬೇಕು ಪತ್ರಿಕೆ ಮಾಧ್ಯಮದ ಪ್ರಜಾಪ್ರಭುತ್ವದ ಹಾಗೂ ಸಮಾಜದಲ್ಲಿ ಬಹಳ ಪ್ರಮುಖ ಪಾತ್ರ ವಹಿಸಿದೆ ಎಂದು ಸಚಿವ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಪತ್ರಕರ್ತರ ಕಾಳಜಿ ಹೊಂದಿದ್ದಾರೆ ಜಿಲ್ಲೆಯ ಪತ್ರಕರ್ತರಿಗೆ ಅಗತ್ಯವಿರುವ ನಿವೇಶನ ಮಂಜೂರು ಮಾಡುವ ಸ್ಥಳ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಸಚಿವನಾಗಿ ಕಾರ್ಯನಿರ್ವಹಿಸುವ ಅವಧಿಯಲ್ಲಿಯೇ ನಿವೇಶನ ಪೂರ್ಣಗೊಳ್ಳಬೇಕು ಎಂದು ಸಚಿವ ಸುಧಾಕರ್ ಭರವಸೆ ನೀಡಿದರು. ಚಿತ್ರದುರ್ಗ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮಾತನಾಡಿ ಜಿಲ್ಲೆಯಲ್ಲಿ ಕೆಲವು ದಿನಪತ್ರಿಕೆಗಳು ಮಾತ್ರ ಪರಿಚಯವಿತ್ತು ಆದರೆ ಪತ್ರಿಕಾ ರಂಗ ಇನ್ನಷ್ಟು ದೊಡ್ಡದು ಎಂಬುದು ನನಗೆ ಇಂದು ತಿಳಿಯಿತು ಪತ್ರಕರ್ತರು ಮತ್ತು ಪತ್ರಿಕಾ ವಿತರಕರಿಗೆ ನಾನು ಸದಾ ಸಾಕಾರ ನೀಡುತ್ತೇನೆ.

ಪತ್ರಿಕಾ ವಿತರಕರು ನನಗೆ ಒಂದಿಷ್ಟು ಸಮಸ್ಯೆಗಳ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ ಮುಂದಿನ ದಿನಗಳಲ್ಲಿ ಚರ್ಚಿಸಿದ್ದೇನೆ ಎಂದರು. ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಟಿ ರಘುಮೂರ್ತಿ ಮಾತನಾಡಿ ಸರ್ಕಾರದ ನಾಲ್ಕನೇ ಅಂಗವಾಗಿ ಪತ್ರಿಕಾ ರಂಗ ಕೆಲಸ ಮಾಡುತ್ತಿದೆ. ಜಿಲ್ಲೆಯ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು ಎಚ್ಚರಿಕೆ ನೀಡುವ ಕೆಲಸ ಮಾಧ್ಯಮ ಮಾಡುತ್ತಿದೆ.

ಈ ಬಾರಿ ಪತ್ರಿಕಾ ದಿನಾಚರಣೆ ತುಂಬಾ ವಿಶೇಷವಾಗಿ ನಡೆಯುತ್ತಿರುವುದು ತುಂಬಾ ಸಂತೋಷ ತಂದಿದೆ ದುಡಿಮೆಗೆ ಹಲವಾರು ದಾರಿಗಳಿವೆ ಆದರೆ ಮಾಧ್ಯಮ ಕ್ಷೇತ್ರಕ್ಕೆ ಪಾದರ್ಪಣೆ ಮಾಡುವವರಿಗೆ ಮಾತ್ರ ಸಾಮಾಜಿಕ ಕಾಳಜಿ ಹೆಚ್ಚಿರುತ್ತೆ ಅಂತಹ ವ್ಯಕ್ತಿಗಳು ಮಾತ್ರ ಈ ಕ್ಷೇತ್ರಕ್ಕೆ ಬರಲು ಸಾಧ್ಯ ಎಂದರು ಹಲವು ಸವಾಲುಗಳನ್ನು ಮೆಟ್ಟಿ ನಿಂತರೆ ಮಾತ್ರ ಪತ್ರಕರ್ತರಾಗಲು ಸಾಧ್ಯ ಸಮಾಜದ ಮತ್ತು ಸರ್ಕಾರವನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ಹೊಣೆಗಾರಿಕೆ ಪತ್ರಕರ್ತರ ಮೇಲಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಜೊತೆಯಾಗಿ ಹೆಜ್ಜೆ ಹಾಕೋಣ ಎಂದು ಹೇಳಿದರು.

ಕಾರ್ಯ ನಿರತ ಪತ್ರಕರ್ತ ಸಂಘಕ್ಕೆ 5 ಲಕ್ಷ ಅನುದಾನ ಪರಿಷತ್ ಸದಸ್ಯ ಶಾಸಕ ನವೀನ್ ಮಾತನಾಡಿ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಸಘಕ್ಕೆ ಅಗತ್ಯವಿರುವ ಸಲಕರಣೆಗಳನ್ನು ನೀಡಲು ಶಾಸಕ ಕೆ ಎಸ್ ನವೀನ್ ಮಾತನಾಡಿ ಚಿತ್ರದುರ್ಗ ಜಿಲ್ಲೆ, ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅಗತ್ಯವಿರುವ ಸಲಕರಣೆಗಳನ್ನು ನೀಡಲು ಶಾಸಕರ ಪ್ರಾದೇಶಿ ಅಭಿವೃದ್ಧಿ ನಿಧಿ ಅಡಿಯಲ್ಲಿ 5 ಲಕ್ಷ ಅನುದಾನ ಮಂಜೂರು ಮಾಡೋದಾಗಿ ತಿಳಿಸಿದರು ಇದರೊಂದಿಗೆ ಜಿಲ್ಲೆಯ 157 ಪತ್ರಿಕೆ ವಿತರಕರಿಗೆ ರೇಡಿಯೋ ಸ್ಪೀಕರ್ ರಿಪ್ಲೇಟರ್ ಹೊಂದಿರುವ ಜಾಕೆಟ್ ಗಳನ್ನು ನೀಡಲಾಗುವುದು ಎಂದರು. ಶಾಸಕ ವೀರೇಂದ್ರ ಪಪ್ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ರಘುಮೂರ್ತಿ, ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಸದಸ್ಯ ಎಂ. ಎನ್. ಅಹೋಬಲ ಪತಿ, ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಬಿ.ಬಿ ಮಲ್ಲಿಕಾರ್ಜುನಯ್ಯ, ಅಪರಾ ಜಿಲ್ಲಾಧಿಕಾರಿ ಭೇಟಿ ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಸ್ ಜೆ ಸೋಮಶೇಖರ್, ಜಿಲ್ಲಾ ವಾರ್ತಾ ಅಧಿಕಾರಿ ಡಿ.ವಿ ತುಕಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜೆ ಕುಮಾರಸ್ವಾಮಿ ಸೇರಿದಂತೆ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿವಿಧ ಮಾಧ್ಯಮ ಪ್ರತಿನಿಧಿಗಳು ಕನ್ನಡಪರ ಹೋರಾಟಗಾರರು, ರೈತ ಸಂಘ, ಕಮ್ಯುನಿಸ್ಟ್ ಪಕ್ಷದ ಪ್ರತಿನಿಧಿಗಳು, ಹಲವು ಸಂಘಟನೆಯ ಪದಾಧಿಕಾರಿಗಳು, ಹಾಗೂ ಪತ್ರಿಕ ವಿತರಕ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related Post

Leave a Reply

Your email address will not be published. Required fields are marked *