ಕಲಬುರಗಿ: ಜಮೀನೊಂದರಲ್ಲಿ ಸುಟ್ಟಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಲಬುರಗಿಯ ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಮಹಿಳೆ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಬಳಿಕ ಗುರುತು ಸಿಗಬಾರದೆಂದು ಸುಟ್ಟು ಹಾಕಿದ್ದಾರೆ.
ಕಲಬುರಗಿ ನಗರದ ಜಗತ್ ಬಡಾವಣೆಯಲ್ಲಿ ನಿವಾಸಿ ಬಸಮ್ಮ (45) ಮೃತ ದುರ್ದೈವಿ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಎಸ್ಪಿ ಅಡ್ಡರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾಗಾವ್ ಪೊಲೀಸ್ ಠಾಣಾವ್ಯಾಪ್ತಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಹತ್ಯೆಗೆ ಕಾರಣವೇನು? ಹತ್ಯೆ ಮಾಡಿದ್ದು ಯಾರು ಎಂಬುದು ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.