ಚಿತ್ರದುರ್ಗ ಜಿಲ್ಲೆಯಾದ್ಯಂತ ಲಕ್ಷಾಂತರ ರೈತರು ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದು, ರೈತರಿಗೆ ಭೂಮಿ ವಸತಿ ರಹಿತ ವಸತಿಗಳನ್ನು ರೈತರಿಗೆ ಕೊಡಬೇಕು. ಅರಣ್ಯ ಗೋಮಾಳ ಹುಲ್ಲು ಬನ್ನಿ ಸೇರಿದಂತೆ ಇನ್ನಿತರ ಭೂಮಿಗಳಲ್ಲಿ ಜೀವನೋಪಾಯಕ್ಕಾಗಿ ಉಳುಮೆ ಮಾಡುವ ಭೂಮಿಯ ಹಕ್ಕಿಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ ಎಂದು ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಾಸಕರ ಅಧ್ಯಕ್ಷತೆಯಲ್ಲಿ ಭೂಮಿ ಮಂಚೂರು ಸಮಿತಿಗಳು ರಚನೆಯಾಗಿದ್ದರು ಕಾಲಕಾಲಕ್ಕೆ ಸಭೆ ನಡೆಯುತ್ತಿಲ್ಲ ಹಾಗಾಗಿ ಅಧಿಕಾರಿಗಳು ಹೋರಾಟ ಸಮಿತಿಯ ಮುಖಂಡರನ್ನು ಒಳಗೊಂಡಂತೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ ಭೂಮಿಗೆ ಸಂಬಂಧಿಸಿದಂತೆ ಗೊಂದಲ ಬಗೆಹರಿಸಬೇಕೆಂದು ಪ್ರತಿಭಟನೆಕಾರರು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆಗೆ ನಡೆಸಿದರು.
ಭೂಮಿ ಸಾಗುವಳಿ ಮಾಡುತ್ತಿರುವವರು ಸಲ್ಲಿಸಿರುವ ಅರ್ಜೆಗಳನ್ನು ತಿರಸ್ಕರಿಸದೆ ಬಡವರಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಪಾರದರ್ಶಕವಾಗಿ ತೀರ್ಮಾನಿಸಬೇಕು ಅರಣ್ಯ ಭೂಮಿ ಕಂದಾಯ ಭೂಮಿಯ ಗೊಂದಲಗಳಿದ್ದು ಜಂಟಿ ಸಭೆ ಮೂಲಕ ಸರಿಪಡಿಸಿ ಯಾರನ್ನು ಒಕ್ಕಲಿಬ್ಬಿಸಬಾರದು ನಗರ ಸಮಿತಿ ನೆಪದಲ್ಲಿ ಬಗೆ ಸಾಗುವಳಿಗಾರರಿಗೆ ಭೂಮಿ ಮಂಚೂರು ನೀಡದೆ ವಂಚಿಸುತ್ತಿರುವ ಈ ವಿಚಾರದಲ್ಲಿ ಸರ್ಕಾರವು ಗಂಭೀರವಾಗಿ ಪರಿಗಣಿಸಿ ಒನ್ ಟೈಮ್ ಸೆಟ್ಲ್ಮೆಂಟ್ ಜಾರಿಗೊಳಿಸಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು.
94 ಸಿ ಮತ್ತು 94 ಸಿಸಿ ಅಡಿಯಲ್ಲಿ ವಸತಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಭೂಮಿ ಸಾಗುವಳಿ ಮಾಡುತ್ತಿದ್ದ ಫಾರಂ ನಂಬರ್ 50 53 57ರ ರಲ್ಲಿ ಸಲ್ಲಿಸಿರುವವರಿಗೆ ಭೂಮಿ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರ ಸದಸ್ಯ ಕುಮಾರ್, ಸಮತಳ, ಕಾರ್ಯದರ್ಶಿ ಹನುಮಂತಣ್ಣ, ಈರಣ್ಣ, ಕರಿಯಣ್ಣ, ಸುನಂದಮ್ಮ, ವೆಂಕಟೇಶ್, ನಾಗಣ್ಣ ,ಚಂದ್ರಣ್ಣ, ಪುರುಷೋತ್ತಮ್, ವಿಜಯಮ್ಮ, ಕೆ.ಬಿ ನಾಗರಾಜ್, ರಾಮಚಂದ್ರಪ್ಪ, ಕೆಂಚಪ್ಪ, ರಮೇಶಪ್ಪ, ನೆಲ್ಲಿಕಟ್ಟೆ ಗೌರಮ್ಮ, ಟಿ ಎಂ ರಂಗನಾಥ್ ತಿಮ್ಮಣ್ಣ, ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ರಾಮಚಂದ್ರಪ್ಪ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.