ದಾವಣಗೆರೆ : ಯುವಕನನ್ನು ಮಚ್ಚಿನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಬಾಡ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು.
ಸಂತೆಬೆನ್ನೂರು ನಿವಾಸಿ ಸಂತೋಷ್ (32) ವರ್ಷ ಬರ್ಬರವಾಗಿ ಕೊಲೆಯಾದ ಯುವಕ ಹುಡುಗಿಯರ ವಿಚಾರದಲ್ಲಿ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು ಸಂತೋಷ್ ಮೇಲೆ ಮೂರು ಜನ ಯುವಕರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಹತ್ಯೆಗೆ ನಿಖರವಾದ ಕಾರಣ ತಿಳಿದ ಬಂದಿಲ್ಲ ಪೊಲೀಸರು ತನಿಖೆ ಕೈಗೊಂಡು ಘಟನೆ ಸ್ಥಳಕ್ಕೆ ದಾವಣಗೆರೆ ಎಸ್ ಪಿ ಉಮಾ ಪ್ರಶಾಂತ್ ಬೇಟಿ ನೀಡಿ ಪರಿಶೀಲನೆ ನಡೆಸಿ ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.