ಹಿರಿಯೂರು : ನಗರದ ಹೊರವಲಯದ ಚಿನ್ನಯನ ಹಟ್ಟಿ ಬಳಿ ಅಪರಿಚಿತ ವಾಹನ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಾನಂದ 50 ವರ್ಷ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಮೃತ ಶಿವಾನಂದ ಹಿರಿಯೂರು ತಾಲೂಕಿನ ಜವನಗಂಡನಹಳ್ಳಿ ನಿವಾಸಿಯಾಗಿದ್ದು ಗಾಯಗೊಂಡ ಮತ್ತೊಬ್ಬ ವ್ಯಕ್ತಿಯನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಯಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಇವರಿಬ್ಬರು ಹೂ ಮಾರಲು ಮಾರುಕಟ್ಟೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.