Breaking
Wed. Dec 25th, 2024

ವಾಣಿವಿಲಾಸ ಜಲಾಶಯದಿಂದ ಜವಾನಗೂಂಡನಹಳ್ಳಿ ಹೋಬಳಿಯ ಗಾಯತ್ರಿ ಜಲಾಶಯ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ಹರಿಸಬೇಕೆಂದು ಒತ್ತಾಯ…!

ಹಿರಿಯೂರು : ವಾಣಿವಿಲಾಸ ಜಲಾಶಯದಿಂದ ಜವನಗೂಂಡನಹಳ್ಳಿ ಹೋಬಳಿಯ ಗಾಯತ್ರಿ ಜಲಾಶಯ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಮ್ಮಿಕೊಂಡಿರುವ ಅನಿರ್ದಿಷ್ಟ ಧರಣಿ ಕಾರ್ಯಕ್ರಮ 30ನೇ ದಿನಕ್ಕೆ ಕಾಲಿಟ್ಟಿದೆ.

ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಒಂದು ತಿಂಗಳು ಪೂರೈಸಿದ ಜೊತೆಗೆ ರೈತ ಪ್ರಮುಖರು ಹಾಗೂ ಸ್ಥಳೀಯ ರಾಜಕೀಯ ಪಂಚಾಯತಿ ಧರಣಿ ಸ್ಥಳದಿಂದ ಗ್ರಾಮಾಯತಿವರೆಗೆ ಉರುಳು ಸೇವೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಸಿಬಿ ಪಾಪಣ್ಣ ಅವರು ಸ್ವತಂತ್ರ ಬಂದು 70 ವರ್ಷ ಕಳೆದರೂ ಸಂವಿಧಾನಾತ್ಮಕವಾಗಿ ಜವನ ಗೊಂಡನಹಳ್ಳಿ ಹೋಬಳಿಗೆ ಸಿಗಬೇಕಾದ ನ್ಯಾಯ ಸಮ್ಮತವಾದ ನೀರಿನ ಹಕ್ಕು ಸಿಕ್ಕಿಲ್ಲ. ಈ ಭಾಗದ ಎಲ್ಲಾ ಕರೆಗಳು ನೀರಿಲ್ಲದೆ ಸೊರಗಿ ಅಂತರ್ಜಾಲ ಸಂಪೂರ್ಣವಾಗಿ ಕುಂಟಿತಗೊಂಡಿದೆ.

ಕುಡಿಯುವ ನೀರಿಗೂ ಸಹ ಅಹಂಕಾರ ಉಂಟಾಗಿದೆ ನಮ್ಮ ತಾಲೂಕಿನಲ್ಲಿರುವ ವಿವಿ ಜಲಾಶಯದ ನೀರು ಹರಿಸಿ ಎಂದು ಹೋಬಳಿ ರೈತರು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು ಒಂದು ತಿಂಗಳು ಪೂರೈಸಿದ ಅಧಿಕಾರಿಗಳು ಯಾವ ಅಧಿಕಾರಿಗಳ ಭೇಟಿಗೆ ನಿರ್ಲಕ್ಷ ತೋರಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿಧಾಕರ್ ಅವರು ಎದೆಯ ಮಾರ್ಗವಾಗಿ ಸಂಚರಿಸುತ್ತಿದ್ದ ಸೌಜನ್ಯಕ್ಕಾದರೂ ಪ್ರತಿಭಟನೆ ಸ್ಥಳಕ್ಕೆ ಬಂದು ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ.

ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಈ ಕ್ಷೇತ್ರದ ಸಚಿವರು ಜೆಜೆ ಹೋಬಳಿಯ ರೈತರ ಅನಿರ್ದಿಷ್ಟ ಧರಣಿ ಸತ್ಯಾಗ್ರಹದ ಬಗ್ಗೆ ಧ್ವನಿ ಎತ್ತುವ ಮೂಲಕ ಸರ್ಕಾರದ ಗಮನ ಸೆಳೆಯಬೇಕು ಹೋರಾಟಕ್ಕೆ ಅಂತ್ಯ ಕಾಣಲಿ ಎಂದು ಸಚಿವ ಸಿಬಿ ಪಾಪಣ್ಣ ಒತ್ತಾಯಿಸಿದರು.

ರೈತ ಸಂಘದ ಅಧ್ಯಕ್ಷ ಕಟ್ಟೆ ತಿಪ್ಪೇಸ್ವಾಮಿ ಮಾತನಾಡಿ, ರೈತರ ನೀರಿನ ಆಂದೋಲನ ಆರಂಭಗೊಂಡು ಒಂದು ತಿಂಗಳ ಹಿಂದೆ ಕಳೆದರೂ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಅಧಿಕಾರಿಗಳು ಸಹ ಸ್ಥಳಕ್ಕೆ ಆಗಮಿಸಿ ರೈತರ ಬೇಡಿಕೆಯ ಬಗ್ಗೆ ಗಮನ ಹರಿಸುವುದು ನಿಜಕ್ಕೂ ಖಂಡನೀಯ.

ರೈತರು ಧರಣಿ ನಡೆಸುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರುವುದು ಜಿಲ್ಲಾ ಉಸ್ತುವಾರಿ ಸಚಿವರು ಕರ್ತವ್ಯ ಆದರೆ ಹೋರಾಟಗಾರರನ್ನು ನಿರ್ಲಕ್ಷಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ರಾಜೀನಾಮೆಯನ್ನು ಮುಖ್ಯಮಂತ್ರಿಗಳು ಪಡೆದುಕೊಳ್ಳಬೇಕು. ಇತ್ತ ಜಲಸಂಪನ್ಮೂಲ ಸಚಿವರು ಕೂಡಲೇ ನೀರಾವರಿ ಅಧಿಕಾರಿಗಳನ್ನು ಧರಣಿ ಸ್ಥಳಕ್ಕೆ ಕಳುಹಿಸಿ ರೈತರಿಂದ ಮಾಹಿತಿ ಪಡೆದು ವಾಣಿವಿಲಾಸ ಜಲಾಶಯದಿಂದ ಡಿಪಿಆರ್ ರೆಡ್ಡಿ ಮಂಡಿಸಿ ಈ ಭಾಗದ ಕೆರೆಗಳಿಗೆ ನೀರು ತುಂಬಿಸಲು ಮುಂದಾಗಿದ್ದಾರೆ.

ಆಲೂರು ಸಿದ್ದರಾಮಣ್ಣ, ಎಂ.ಆರ್ ಈರಣ್ಣ ,ನಾಗರಾಜ್ ಮತ್ತು ತಿಮ್ಮರಾಯಪ್ಪ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹೋಬಳಿಯ ಅಧ್ಯಕ್ಷ ಈರಣ್ಣ, ಚಂದ್ರಶೇಖರ್, ಮಂಜುನಾಥ್, ಬಾಲಕೃಷ್ಣ, ತಿಮ್ಮಾರೆಡ್ಡಿ, ರಂಗಸ್ವಾಮಿ, ಹುಸೇನ್, ಶಿವಣ್ಣ, ಬಸವರಾಜ್, ವಜೀರ್, ಕರಿಯಪ್ಪ, ಮಹಮದ್, ಸುರೇಶ್ ಮುಂತಾದವರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *