ಬೆಂಗಳೂರು : ಅರಬ್ಬಿ ಸಮುದ್ರ ಪೂರ್ವಭಾಗದಲ್ಲಿ ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯೊಂದಿಗೆ ಗಾಳಿಯ ವೇಗವು 50 ಕಿಲೋ ಮೀಟರ್ ತಲುಪುವ ಸಾಧ್ಯತೆ ಇದೆ.
ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಶನಿವಾರದಂದು ಉತ್ತರ ಕನ್ನಡ ದಕ್ಷಿಣ ಕನ್ನಡ ಉಡುಪಿ ಶಿವಮೊಗ್ಗ ಚಿಕ್ಕಮಂಗಳೂರು ಕೊಡಗು ಜಿಲ್ಲೆಗಳ ಪ್ರಖ್ಯಾತ ಸ್ಥಳಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯೇ ಇದೆ ಜೊತೆಗೆ ನಿರಂತರ ಗಾಳಿಯು ವೇಗವು 40 ರಿಂದ 50 ಕಿಲೋಮೀಟರ್ ತಲುಪುವ ಸಾಧ್ಯತೆ ಇದೆ.
ಆದ್ದರಿಂದ ಇನ್ನೂ ಹಾಸನ ಜಿಲ್ಲೆಯಲ್ಲಿಯೂ ವ್ಯಾಪಕವಾಗುವ ಸಾಧ್ಯತೆ ಇರುವುದರಿಂದ ಒಳನಾಡಿನ ಬೆಳಗಾವಿ ಬೀದರ್ ಕಲ್ಬುರ್ಗಿ ಯಾದಗಿರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆ ಇರುತ್ತದೆ. ಇನ್ನು ಭಾನುವಾರದಂದು ಉತ್ತರ ಕನ್ನಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯ ವೇಗವು 30 ರಿಂದ 40 ಕಿಲೋಮೀಟರ್ ವಿಪರೀತ ಮಳೆಯಾಗಲಿದೆ ಒಳನಾಡಿನ ಬೆಳಗಾವಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡಿನ ಶಿವಮೊಗ್ಗ ಚಿಕ್ಕಮಂಗಳೂರು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ನಿರಂತರ ಗಾಳಿಯ ವೇಗವು 35 ರಿಂದ 45 ಕಿ.ಮೀ ತಲುಪುವ ಸಾಧ್ಯತೆ ಇದೆ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 25 ಮತ್ತು 20 ಡಿಗ್ರಿ ಸೆಲ್ಸಿಯಸ್ಟ್ ಇರುತ್ತದೆ.
ಹಾಸನ ಜಿಲ್ಲೆಯ ಮಳೆಯ ಅಬ್ಬರ ಮುಂದುವರೆದ ಆರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಸಕಲೇಶ್ವರ ಪುರ ಹಾಲೂರು ಬೇಲೂರು ಹಾಸನ ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕಿನ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ ಅಂಗನವಾಡಿ ಸರ್ಕಾರಿ ಅನುದಾನ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಗಳಿಗೆ ರಜೆ ಘೋಷಿಸಿ ಡಿಡಿಪಿಐ ಎಚ್ ಕೆ ಪಾಂಡು ಆದೇಶ ಹೊರಡಿಸಿದ್ದಾರೆ.