ಚಿತ್ರದುರ್ಗ : ಕರ್ನಾಟಕ ಸರ್ಕಾರದ ರೈತ ವಿರೋಧಿ ನೀತಿಗಳಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಗಟ್ಟುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಂತ ವೆಚ್ಚ ಬರಿಸುವಂತೆ ಸರ್ಕಾರ ತೀರ್ಮಾನಿಸಿರುವುದು ರೈತರಿಗೆ ಒರೆಯಾಗಲಿದೆ ಎರಡರಿಂದ ಮೂರು ಲಕ್ಷ ವೆಚ್ಚ ಬರಿಸುವುದು ರೈತರಿಂದ ಅಸಾಧ್ಯ. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದು ಹಳೆ ಪದ್ಧತಿಯನ್ನು ಮುಂದುವರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವ ಉದ್ದೇಶವೇನು ಎನ್ನುವುದನ್ನು ಸರ್ಕಾರ ತಿಳಿಸಬೇಕು ಭೂ ಸುಧಾರಣಾ ಕಾಯಿದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆ ಕೂಡಲೇ ಹಿಂಪಡೆಯಬೇಕು ರೈತರು ಜಮೀನುಗಳಿಗೆ ಓಡಾಡಲು ನಕಾಶೆ ಇರುವುದರಿಂದ ಅನೇಕ ಹಳ್ಳಿಗಳಲ್ಲಿ ಜಮೀನಿಗೆ ಹೋಗಲು ತೊಂದರೆಯಾಗುತ್ತದೆ ಜಿಲ್ಲಾಧಿಕಾರಿಗಳು ತಾಹಶೀಲ್ದಾರರಿಗೆ ಸೂಚನೆ ನೀಡಿ ಸಮಸ್ಯೆ ಬಗೆಹರಿಸಬೇಕು. ಕಳೆದ ವರ್ಷ ಏಪ್ರಿಲ್ ನಿಂದ ಇದುವರೆಗೂ 1182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಸರ್ಕಾರ ರೈತ ಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಬೇಕು ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಕೃಷಿ ಬೆಲೆ ಆಯೋಗವನ್ನು ಸಬಲೀಕರಣ ಗೊಳಿಸಬೇಕು. ಕೃಷಿ ಉತ್ಪನ್ನಗಳಿಗೆ ರಾಜ್ಯ ಸರ್ಕಾರವೇ ಎಂ ಎಸ್ ಪಿ ನಿಗದಿಪಡಿಸಿ ಖರೀದಿಸಬೇಕು ಎಂದೆಂದೂ ಕಂಡರೆಯದ ಬರಗಾಲವನ್ನು ಎದುರಿಸುತ್ತಿರುವ ರೈತರ ಸಾಲ ಬಾಕಿ ಪಾವತಿಸುವಂತೆ ಬ್ಯಾಂಕ್ ಗಳು ಕಿರಿಕಿರಿ ನೀಡುತ್ತಿದ್ದು ಇವುಗಳನ್ನು ನಿಲ್ಲಿಸಬೇಕು ರೈತರ ಎಲ್ಲಾ ಬೆಳೆಗಳಿಗೆ ಪ್ರಧಾನಮಂತ್ರಿ ಭೀಮ ಫಸಲ್ ಯೋಜನೆಯನ್ನು ವಿಸ್ತರಿಸಿ ಗ್ರಾಮ ಮಟ್ಟದಲ್ಲಿ ಬೆಳೆ ಹಾನಿ ನಿರ್ಧರಿಸಿ ವಿಮಾ ಕಂಪನಿಗಳು ಉಳಿಸಿಕೊಂಡಿರುವ ಬಾಕಿಯನ್ನು ರೈತರ ಖಾತೆಗೆ ತಕ್ಷಣವೇ ಜಮಾ ಮಾಡಬೇಕೆಂದು ಆಗ್ರಹಿಸಿದರು. ಪಸಲು ಪಹಣಿ ದುರಸ್ತಿ ಪಕ್ಕ ಪೋಡು ಹದ್ದುಬಸ್ತು ಶುಲ್ಕ ದುಬಾರಿಯಾಗಿರುವುದರಿಂದ ಇವುಗಳನ್ನು ಕಡಿಮೆ ಮಾಡಬೇಕು. ಅರಣ್ಯ ಬೋಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯವರಿಂದ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾರೆ ಅವರಿಗೆ ಅರಣ್ಯ ಇಲಾಖೆಯಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಪಾಣಿ ಪಟ್ಟ ನೀಡಬೇಕೆಂದು ರೈತರು ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಪಿ ಭೂತಯ್ಯ, ಬೇಡರಹಳ್ಳಿ ಬಸವ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ವರ್ಕೇರಪ್ಪ, ಉಪಾಧ್ಯಕ್ಷ ಚಿಕ್ಕಪ್ನಲ್ಲಿ ರುದ್ರಸ್ವಾಮಿ, ತಾಲೂಕು ಅಧ್ಯಕ್ಷ ಧನಂಜಯ, ಹಂಪಯ್ಯನ ಮಾಳಿಗೆ ನಾಗರಾಜ್, ಮುದ್ದಾಪುರ, ತಿಪ್ಪೇಸ್ವಾಮಿ, ಚೇತನ್ ಯೆಳ್ಗೋಡು, ಕರಿಬಸಪ್ಪ, ಕುಮಾರಸ್ವಾಮಿ, ಕೋಗೊಂಡೆ ರವಿ, ಏಕಾಂತಪ್ಪ, ಪ್ರಭು ಬಿ.ಒ. ಶಿವಕುಮಾರ್, ನಾಗೇಂದ್ರಪ್ಪ, ಸರ್ವೋದಯ ಕರ್ನಾಟಕ ಪಾರ್ಟಿ ಜಿಲ್ಲಾಧ್ಯಕ್ಷ ಜೆ ಯಾದವ ರೆಡ್ಡಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು