ಚಿತ್ರದುರ್ಗ : ನಗರದ ಚಳ್ಳಕೆರೆ ರಸ್ತೆಯ ಸಾಯಿ ಸಿಟಿ ಲೇಔಟ್ ನಲ್ಲಿ ಬಾಡಿಗೆ ಮನೆ ತೆಗೆದುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡ ಮೇಲೆ ಪೊಲೀಸರು ಧಿಡೀರ್ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಚಿತ್ರದುರ್ಗ ನಗರ ಚಳ್ಳಕೆರೆ ರಸ್ತೆಯ ಸಾಯಿ ಸಿಟಿ ಲೇಔಟ್ ನಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಖಚಿತಪಡಿಸಿಕೊಂಡ ಬಡಾವಣೆ ಸಿಪಿಐ ನಯೂಮ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ರಘು ಪತ್ನಿ ನೀಲಾಂಬರಿ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಬೆಂಗಳೂರಿನ ಓರ್ವ ಯುವತಿ ಸೇರಿದಂತೆ ಐವರನ್ನು ರಕ್ಷಣೆ ಮಾಡಿದ್ದಾರೆ.
ಈ ಪ್ರಕರಣ ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.