ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಪೋಷಕಾಂಶಯ ಕೊರತೆ ನೀಗಿಸಲು ಸರ್ಕಾರ ವಾರದಲ್ಲಿ ಆರು ದಿನವೂ ಮಕ್ಕಳಿಗೆ ಪೌಷ್ಟಿಕಾಂಶ ಆಹಾರ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ನಾಳೆ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶ ಆಹಾರವನ್ನು ವಾರದಲ್ಲಿ ಆರು ದಿನ ಉಚಿತವಾಗಿ ವಿತರಿಸುವಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಜೀಮ್ ಪ್ರೇಮ್ ಜೀ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ಮಕ್ಕಳಿಗೆ ಪೋಷಕತೆ ವೃದ್ಧಿಸಲು 2024 25 ನೇ ಸಾಲಿನ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ವಾರದಲ್ಲಿ ಆರು ದಿನಗಳಂದು ಉಚಿತವಾಗಿ ವಿತರಿಸುವ ಕಾರ್ಯಕ್ರಮ ಉದ್ಘಾಟನೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಅಜಿಮ್ ಪ್ರೇಮ್ ಜಿ ಅಧ್ಯಕ್ಷ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಹಾಗೂ ಸಂಸ್ಥಾಪಕ ಅಧ್ಯಕ್ಷ ವಿಪ್ರೋ ಲಿಮಿಟೆಡ್ ಇವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಪ್ರಸ್ತಾವಿಕ ನೋಡಿ ಮಾತನಾಡಿದ ಎಸ್ ಮಧು ಬಂಗಾರಪ್ಪ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವರು ಆಡಲಿದ್ದಾರೆ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಿಜ್ವಾನ್ ಹರ್ಷದ್ ಶಾಸಕರು ಶಿವಾಜಿನಗರ ವಿಧಾನಸಭಾ ಕ್ಷೇತ್ರ ಇವರು ವಹಿಸಲಿದ್ದಾರೆ ಎಂದು ತಿಳಿಸಿದರು.