ಚಿತ್ರದುರ್ಗ : ಬೆಂಗಳೂರಿನಂದ ಪೂನಾ ಕಡೆಗೆ ಹೋಗುವ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ದೊಡ್ಡ ಸಿದ್ದವನ ಹಳ್ಳಿ, ತಡರಾತ್ರಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ದಾರಿಯಲ್ಲಿ ಎರಡು ಲಾರಿಗಳ ಚತುಷ್ಪಥ ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಎಂಬದೆಯಿಂದ ಓವರ್ಟೇಕ್ ಮಾಡುವಾಗ ಮುಂದೆ ಚಲಿಸುತ್ತಿದ್ದ ಹಾಲಿನ ವಾಹನಕ್ಕೆ ಹಿಂಬದಿಯಿಂದ ಬಂದ ಲಾರಿ ಬೆಕ್ಕಿ ಹೊಡೆದಿದೆ ಈ ವೇಳೆ ಎರಡು ಲಾರಿಗಳು ನೆಲ ಕುರುಳಿ ಅಪಘಾತ ಸಂಭವಿಸಿದ್ದು ಈ ಮಧ್ಯೆ ಗೌರವ ವ್ಯಕ್ತಿಯ ಕಾಲಿಗೆ ಗಂಭೀರವಾಗಿ ಪೆಟ್ಟು ಬಿದ್ದು ಆತನನ್ನು ಚಿಕಿತ್ಸೆಗೆಂದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.