ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು. ಯಲಹಂಕದ ಸಿಂಗೇನಳ್ಳಿಯಲ್ಲಿ ಈಡೀಸ್ ಸೊಳ್ಳೆಯ ಲಾರ್ವ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು.
ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನು ಮುಂದುವರೆಸಿದರು ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣದಲ್ಲಿ ಇಳಿಮುಖ ಕಾಣುವ ನಿರೀಕ್ಷೆ ಒಂದರಲ್ಲಿದೆ ಎಂದು ತಿಳಿಸಿದರು. ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಹಿಳೆಮಿಕವಾಗಿವೆ.
ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ ಶೇಕಡ 50ರಷ್ಟು ಡೆಂಗ್ಯೂ ಪ್ರಕರಣಗಳಿವೆ ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಿ ಡೆಂಗಿಯನ್ನು ಹತೋಟಿಗೆ ತರುವಂತೆ ಸೂಚಿಸಿದರು 10 ಜಿಲ್ಲೆಗಳ ಡೆಂಗ್ಯೂ ಹಾಟ್ಸ್ಪಾಟ್ ಗಳಿಗೆ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ಕಳಿಸುವಂತೆ ಹೇಳಿದರು. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಡೆಂಗೆ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಂಡು ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನಹರಿಸಬೇಕು ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಗುರುತಿಸಲಾಗುತ್ತದೆ ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಅಲ್ಲಿ ಫೇವರ್ ಕ್ಲಿನಿಕ್ ಗಳನ್ನು ತೆರೆದು ಜ್ವರ ಕಾಣಿಸುವ ಎಲ್ಲರನ್ನೂ ಡೆಂಗ್ಯೂ ಟೆಸ್ಟ್ ಗೆ ಒಳಪಡಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಕೇರಳದಲ್ಲಿ ನಿಪಾ ವೈರಸ್ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಇದೆ ವೇಳೆ ಸಚಿವ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ನಿಪಾ ವೈರಸ್ ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರ ಬಗ್ಗೆ ಎಚ್ಚರಿಕೆವಹಿಸಿ ಮಾರ್ಗಸೂಚಿ ವರ್ಣಿಸಬೇಕೆಂದು ತಿಳಿಸಿದರು ಅಗತ್ಯ ಬಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ ಕೇರಳಕ್ಕೆ ತೆರಳುವುದು ಬೇಡ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.