Breaking
Mon. Dec 23rd, 2024

15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯ ದೇಶದ ಯಾವ ರಾಜ್ಯಕ್ಕೂ ಆಗಿಲ್ಲ ಸಿದ್ದರಾಮಯ್ಯ…!

ಮೈಸೂರು : ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇಕೆದಾಟು ಯೋಜನೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ದರಿದ್ದೇವೆ. ತಮಿಳುನಾಡಿನವರು ರಾಜಕೀಯ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ ಆದ್ದರಿಂದ ಕೇಂದ್ರದವರು ಮಧ್ಯಸ್ಥಿಕೆ ವಹಿಸಲಿ ಅಂತ ಒತ್ತಾಯಿಸಿದರು.

ಇದೆ ವೇಳೆ ನೀತಿ ಆಯೋಗದ ಸಭೆಗೆ ಗೈರಾದ ವಿಚಾರಕ್ಕೆ ಪ್ರತಿಕ್ರಿಯಿಸಿ ಉದ್ದೇಶ ಪೂರಕವಾಗಿ ನೀತಿ ಆಯೋಗದ ಸಭೆಗೆ ಬಾಯ್ಕಾಟ್ ಮಾಡಿದ್ದೇನೆ. ನಾನು ಮಾತ್ರ ಅಲ್ಲ ಬಿಜೆಪಿಯೇತರ ಸರ್ಕಾರದ ರಾಜ್ಯಗಳು ಬಾಯ್ಕಾಟ್ ಮಾಡಿದ್ದಾರೆ. ರಾಜ್ಯಕ್ಕೆ ನ್ಯಾಯವೇ ಸಿಗದಿದ್ದ ಮೇಲೆ ಸಭೆಗೆ ಹೋಗಿ ಏನು ಪ್ರಯೋಜನ ? ಕೇಂದ್ರ ಬಜೆಟಿನಲ್ಲಿ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಪ್ರತಿ ಬಾರಿ ನಿರ್ಮಲ ಸೀತಾರಾಮನ್ ರಾಜ್ಯಕ್ಕೆ ಬಂದು ಸುಳ್ಳು ಹೇಳಿ ಹೋಗುತ್ತಿದ್ದಾರೆ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಕರ್ನಾಟಕದ ಋಣ ತೀರಿಸಬಾರದಾ ಎಂದು ಪ್ರಶ್ನೆ ಮಾಡಿದರು.

ಕುಮಾರಸ್ವಾಮಿ ಮಂಡ್ಯದಿಂದ ಆಯ್ಕೆಯಾಗಿದ್ದಾರೆ ಮಂಡ್ಯ ಕ್ಷೇತ್ರಕ್ಕೆ ಸಕ್ಕರೆ ಕಾರ್ಖಾನೆ ತಂದಿದ್ದಾರಾ? 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯ ದೇಶದ ಯಾವ ರಾಜ್ಯಕ್ಕೂ ಆಗಿಲ್ಲ ಅತೀ ಹೆಚ್ಚು ತೆರಿಗೆ ಕೊಡುವ ಎರಡನೇ ರಾಜ್ಯ ಕರ್ನಾಟಕ ಇಂತಹ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಅನ್ಯಾಯ ಆಗಿಲ್ಲ ಎಂದು ಕೇಂದ್ರ ಸಚಿವರು ಹೇಳುತ್ತಾರೆ ಆಂಧ್ರ ಪ್ರದೇಶ ಬಿಹಾರಕ್ಕೆ ಕೊಟ್ಟಿರುವ ಅನುದಾನವೆಷ್ಟು ನಮ್ಮದು ಎಷ್ಟು ಎಂದು ಹೇಳಲಿ ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಹಳೆಯ ಯಾವ ಯೋಜನೆಗಳಿಗೆ ದುಡ್ಡು ಕೊಟ್ಟಿಲ್ಲ ನಿಮಗೆ ಪಾಠ ಮಾಡಲು ಬರುತ್ತಾ ನಿರ್ಮಲ ಸೀತಾರಾಮನ್ ವಿರುದ್ಧ ಸಿಎಂ ಗುಡುಗಿದರು.

ನನ್ನ ಅವಧಿಯಲ್ಲಿ ಕರಪ್ಶನ್ ಸಂಪೂರ್ಣ ಹೋಗಿದೆ ಎಂದು ಹೇಳಲ್ಲ ಆದರೆ ಕಡಿಮೆಯಾಗಿದೆ ಎಂದು ಹೇಳಬಲ್ಲೆ ಬಿಜೆಪಿಯ ಅವಧಿಯಲ್ಲಿ ಭ್ರಷ್ಟಾಚಾರ ಎಷ್ಟಿತ್ತು ಅದನ್ನು ಇಡೀ ದೇಶವೇ ನೋಡಿದೆ ಈಗ ಕರ್ನಾಟಕವನ್ನೇ ಭ್ರಷ್ಟ ರಾಜ್ಯ ಎಂದು ಬಿಂಬಿಸುವ ಯತ್ನ ಬಿಜೆಪಿ ಮಾಡುತ್ತಿದೆ ಸಂಸತ್ತಿನಲ್ಲಿ ಕರ್ನಾಟಕಕ್ಕೆ ಭ್ರಷ್ಟಾಚಾರದ ಹಣೆಪಟ್ಟಿ  ಕಟ್ಟುವ ಯತ್ನ ನಡೆಸಲಾಗಿದೆ.ಬಿ.ಜೆ.ಪಿಗೆ ಮಾನ ಮರ್ಯಾದೆ ಇದ್ಯಾ ಅಂತ ಪ್ರಶ್ನೆ ಮಾಡಿದರು.

Related Post

Leave a Reply

Your email address will not be published. Required fields are marked *