ಬೆಂಗಳೂರು : ರಾಜ್ಯದಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಿಂದ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಿಲ್ಲ ಹಾಗಾಗಿ ಟಿಕೆಟ್ ದರ ಹೆಚ್ಚಳ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಕೆ ಎಸ್ ಆರ್ ಟಿ ಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡದಿದ್ದರೆ ನಿಗಮಕ್ಕೆ ದೊಡ್ಡ ಹೊರೆ ಬೀಳುವುದು ಇದರಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗುತ್ತದೆ ಎಂದು ನಿಗಮ ಅಧಿಕಾರಿಗಳು ತಿಳಿಸಿದರು. ಸರ್ಕಾರಿ ನೌಕರರ ಸಂಬಳ ಹೆಚ್ಚಳ ಮತ್ತು ಇತರೆ ಸವಾಲುಗಳನ್ನು ಕೊಡಬೇಕಾದರೆ ಬಸ್ ಟಿಕೆಟ್ ದರವು ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ.
2020ರಲ್ಲಿಯೇ ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆ ಮಾಡಬೇಕಿತ್ತು, ಆದರೆ ಬಸ್ ಟಿಕೆಟ್ ದರ ಹೆಚ್ಚಳ ಮಾಡದೆ ಹಿನ್ನೆಲೆಯಲ್ಲಿ ಆರ್ಥಿಕ ಸಮಸ್ಯೆ ಉಂಟಾಗಬಹುದೆಂಬ ದೃಷ್ಟಿಯಿಂದ ಇಲ್ಲಿಯವರೆಗೂ ನೌಕರರ ವೇತನ ಪರಿಷ್ಕರಣೆ ಮಾಡಿಲ್ಲ ಈ ಬಾರಿ 2024ರಲ್ಲಿ ವೇತನ ಪರಿಷ್ಕರಣೆ ಮಾಡಬೇಕಿದೆ ಹಾಗಾಗಿ ಬೆಲೆ ಏರಿಕೆ ಅನಿವಾರ್ಯ ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಇತ್ತೀಚಿಗೆ ಹಾಲು ಪೆಟ್ರೋಲ್ ದರವನ್ನು ಏರಿಕೆ ಮಾಡಲಾಗಿದ್ದು ಇದಕ್ಕೆ ವ್ಯಾಪಕವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ ಇದರ ಬೆನ್ನಲ್ಲೇ ಕೆಎಸ್ಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡುವುದಕ್ಕೆ ರಾಜ್ಯದ ಜನತೆಗೆ ದೊಡ್ಡ ವರೆ ಬೀಳುವ ಸಾಧ್ಯತೆ ಇದೆ.
ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಇಲ್ಲ ಎಂದಿದ್ದ ರಾಮಲಿಂಗ ರೆಡ್ಡಿ ಇತ್ತೀಚಿನ ಹೇಳಿಕೆ ನೀಡಿದರು ವಿಧಾನಸೌಧದಲ್ಲಿ ಮಾತನಾಡಿದ ಅವರು ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರೋ ಅವರ ವೈಯಕ್ತಿಕ ಅಭಿಪ್ರಾಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿಸಿದರು.