ಬೆಂಗಳೂರು : ಕೇರಳದ ವಯ್ನಾಡಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಕೇರಳದ ವಾಯ್ ನಾಡಿ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಸೇರುತಿದೆ ಇದೊಂದು ಅತ್ಯಂತ ಘೋರ ದುರಂತ ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡಿದ್ದು ಮತ್ತಷ್ಟು ನೋವುಂಟು ಮಾಡಿದೆ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಈಗಾಗಲೇ ರಾಜ್ಯದಲ್ಲಿ ಇಬ್ಬರು ಏರಿಯಾ ಐಎಸ್ ಅಧಿಕಾರಿಗಳು ಎನ್ಆರ್ಡಿಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನೆರತರಾಗಿದ್ದಾರೆ ಇಂದು ರಕ್ಷಣಾ ಕಾರ್ಯದ ಉಸ್ತುವಾರಿಯಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವೈನಾಡಿಗೆ ಕಳಿಸಲಾಗುತ್ತಿದೆ ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು ಸಂಕಷ್ಟದಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕೇರಳದ ವೈನಾಡಿನಲ್ಲಿ ಸಂಭವಿಸಿದ ಬುಕ್ ಕುಸಿತದಿಂದ ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಧಾವಿಸಲು ಇಬ್ಬರು ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಲಾಗಿದೆ ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆದಿದೆ ಎಚ್ ಡಿ ಕೋಟೆಯಲ್ಲಿ ಗಾಯಾಳುಗಳನ್ನು ಕರೆತಂದು ಅಗತ್ಯ ಚಿಕಿತ್ಸೆ ಕೊಡಲು ಬಸ್ಸುಗಳು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ ಈಗಾಗಲೇ ಅಗತ್ಯ ಸಲಕರಣೆಗಳನ್ನು ಹೊತ್ತು ತಂದ ಬೆಂಗಳೂರಿನಲ್ಲಿ ಎನ್ಆರ್ಡಿಎಫ್ ಹಾಗೂ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಸೇನಾ ಪಡೆಯ ತಂಡಗಳು ವೈನಾಡು ತಲುಪಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವೆ.
ವೈನಾಡು ದುರಂತವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಕರ್ನಾಟಕದ ಯಾವುದೇ ಮೂಲೆಯಲ್ಲಿ ಪ್ರವಾಹ ಭೂಕುಸಿತ ಅಥವಾ ಇತರೆ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದರೆ ಅದನ್ನು ಸಮರ್ಪಕವಾಗಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರುವ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.