ಬೆಳಗಾವಿ : ರಾಜ್ಯದಲ್ಲಿ ಅತಿವೃಷ್ಟಿ ಉಂಟಾಗಿರುವ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಪ್ರತಿಯೊಬ್ಬ ತಹಸಿಲ್ದಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ಕಾಳಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು ಯಾವುದೇ ಕಾರಣಕ್ಕೂ ಜನರು ಮತ್ತು ಜಾನುವಾರುಗಳ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಕಾಳಜಿ ಕೇಂದ್ರಗಳಲ್ಲಿ ಉಟ್ಟೋಪ ಹಾರ ಔಷಧಿ ಸಾಮಗ್ರಿಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಬನ್ಸಾಲ್ ಕಟ್ಟನೆಟ್ಟಿನ ಸೂಚನೆ ನೀಡಿದರು.
ಆಗಸ್ಟ್ ನಲ್ಲಿ ಮಳೆಯ ಪ್ರವಾಹ ಹೆಚ್ಚಾಗುವ ಸೂಚನೆ ಇದೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಆಹಾರ ಸಂರಕ್ಷಣೆ ಸಾಮಗ್ರಿ ಔಷಧಿ ಮತ್ತು ನೀರು ಮತ್ತಿತರ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಜಾನುವಾರು ಶಿಬಿರಗಳಲ್ಲಿ ಮೇವು ದಾಸ್ತಾನು ಇಟ್ಟುಕೊಳ್ಳಬೇಕು 2019 ರಲ್ಲಿ ಜಿಲ್ಲೆಯಲ್ಲಿ ಉದ್ಭವಿಸಿದ ಸಮಸ್ಯೆಗಳನ್ನು ತಿಳಿದುಕೊಂಡು ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಉಪ ವಿಭಾಗ ಅಧಿಕಾರಿಗಳು ಮತ್ತು ತಾಸಿಲ್ದಾರರಿಗೆ ನಿರ್ದೇಶನ ನೀಡಿದರು.
ಜಲಾಶಯಗಳಿಂದ ನೀರು ಬಿಡುಗಡೆ ಬ್ಯಾರೇಜ್ ಗಳನ್ನು ನಿರ್ವಹಿಸುವ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯಗಳೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ನದಿಗಳು ಅಪಾಯ ಮಟ್ಟ ಮೀರಿ ಅರಿಯುವುದರಿಂದ ಜನರ ಪ್ರಾಣರಕ್ಷಣೆ ಕಾಳಜಿ ವಹಿಸಬೇಕು.
ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ತಾಸಿಲ್ದಾರ್ ಖಾತೆಯಲ್ಲಿ ಸಾಕಷ್ಟು ಹಣವಿದೆ ಒಂದು ವೇಳೆ ಹಣದ ಕೊರತೆ ಇದ್ದರೆ ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಸೂಚನೆ ನೀಡಿದರು. ಕೃಷಿ ಹಾಗೂ ತೋಟಗಾರಿಕೆ ಬೆಳೆ ಆನೆಗಳ ಬಗ್ಗೆ ಸಮರ್ಪಕವಾಗಿ ಪರಿಶೀಲನೆ ನಡೆಸಬೇಕು ಇದೇ ರೀತಿ ರಸ್ತೆಗಳ ಆನೆಯ ಸಮೀಕ್ಷೆ ನಡೆಯಬೇಕು ಯಾವುದೇ ಹಂತದಲ್ಲೂ ಅಧಿಕಾರಿಗಳು ನಿರ್ಲಕ್ಷದಿಂದ ಜನರು ಅಥವಾ ಜಾನುವಾರುಗಳ ಜೀವಾನಿಯಾಗಬಾರದು ಎಂದು ತಿಳಿಸಿದರು.
ಪ್ರತಿಯೊಂದು ಇಲಾಖೆಯು ಅಧಿಕಾರಿಯು ಜಾಗೃಕತೆಯಿಂದ ಕಾರ್ಯನಿರ್ವಹಿಸಬೇಕು ಯಾವುದೇ ಅಧಿಕಾರಿ ರಜೆ ತೆರಳದೆ ಯಾವಾಗಲೂ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕೆಲಸ ಮಾಡಬೇಕು ಎಂದು ತಿಳಿಸಿದರು. ನದಿಯ ಒಳಹರಿವು ಕ್ರಮೇಣ ಕಡಿಮೆಯಾಗುತ್ತಿದ್ದಂತೆ ಆದರೂ ಕಳೆದ ಒಂದು ವಾರದಿಂದ ಮುಂಜಾಗ್ರತಾ ಕ್ರಮವಾಗಿ 123 ಟಿಎಂಸಿ ಅಡಿ ಸಾಮರ್ಥ್ಯದ ಅಡಿ ಆಲಮಟ್ಟಿ ಜಲಾಶಯದಲ್ಲಿ ಸಂಗ್ರಹವಾಗಿದ್ದ 97 ಟಿ.ಎಂ.ಸಿ ನೀರನ್ನು ಒಂದು ವಾರದಿಂದ ಪ್ರತಿದಿನ ಬಿಡುಗಡೆಗೊಳಿಸುವ ಮೂಲಕ ಸದ್ಯಕ್ಕೆ 67 ಟಿಎಂಸಿ ಅಡಿ ಕಡಿಮೆಯಾಗಿ ಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಮದ್ ರೋಷನ್ ವಿವರಿಸಿದ್ದರು.
ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆ ಹಾಗೂ ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಮನ್ವಯದೊಂದಿಗೆ ಜಲಾಶಯಗಳ ಜಲಮಟ್ಟವನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸಬೇಕು ಪ್ರವಾಹ ಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಬೇಕೆಂದು ತಿಳಿಸಿದರು. ಕೃಷ್ಣ, ಘಟಪ್ರಭಾ, ಮಲಪ್ರಭಾ, ಸೇರಿದಂತೆ ಎಲ್ಲಾ ನದಿ ಪಾತ್ರದ ಗ್ರಾಮಗಳ ಜನರನ್ನು ರಕ್ಷಣೆ ಮತ್ತು ತುರ್ತು ಸಂದರ್ಭದಲ್ಲಿ ಸ್ಥಳಾಂತರಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು.
ಜನರು ಅಥವಾ ಜಾನುವಾರುಗಳ ಜೀವ ಹಾನಿ ಪ್ರಕರಣಗಳಲ್ಲಿ 24 ಗಂಟೆಗಳಲ್ಲಿ ಸಂಬಂಧಿಸಿದ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಎಲ್ಲಾ ತಹಸಿಲ್ದಾರರಿಗೆ ನಿರ್ದೇಶನ ನೀಡಲಾಗಿದೆ ಎಂದು ರೋಷನ್ ತಿಳಿಸಿದರು. ಜಲಾದ್ಯಂತ 427 ಕಾಲೇಜಿ ಕೇಂದ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಲಾಗಿದೆ ಅಗತ್ಯತೆ ಇದ್ದರೆ ಜುಲೈ 30 ರವರೆಗೆ 46 ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾದ 3684 ಕುಟುಂಬಗಳ 10304 ಜನರಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಒದಗಿಸಲಾಗಿರುತ್ತದೆ.
ಜನರ ಸುರಕ್ಷಣೆ ಹಿತದೃಷ್ಟಿಯಿಂದ ಗೋಕಾಕ್ ಫಾಲ್ಸ್ ಸೇರಿದಂತೆ ಕೆಲವು ಫಾಲ್ಸ್ ಗಳ ಸಮೀಪ ಹೋಗದಂತೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾ ವರಿಷ್ಠ ಅಧಿಕಾರಿ ಡಾ. ಭೀಮಶಂಕರ ಗುಳೇದ ತಿಳಿಸಿದರು. ಇದಲ್ಲದೆ ಮುಳುಗಡೆಯಾಗಿರುವ ಕೆಳಹಂತದ ಸೇತುವೆಗಳ ಮೇಲೆ ಜನ ಮತ್ತು ವಾಹನ ಸಂಚಾರ ತಡೆ ಬ್ಯಾರ್ಕೆಟ್ ಅಳವಡಿಸಿ ಸಿಬ್ಬಂದಿ ನಿಯೋಜಿಸಲಾಗಿದೆ. ಮುಳುಗಡೆಯಾಗಿರುವ ಕೆಲವು ಸೇತುಗಳ ಸದ್ಯಕ್ಕೆ ಸಂಚಾರ ಮುಕ್ತವಾಗಿದ್ದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ ಬಳಿಕ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವುದೆಂದು ವಿವರಿಸಿದರು.
ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ರೋಹನ್ ಜಗದೀಶ್, ಪ್ರವೇಶನರಿ ಐಎಎಸ್ ಅಧಿಕಾರಿ ದಿನೇಶ್ ಕುಮಾರ್ ಮೀನಾ ಮಾಹಿತಿ ವಿನಿಮಯ ಮಾಡಿಕೊಂಡರು. ಮಹಾನಗರ ಪಾಲಿಕೆ ಆಯುಕ್ತ ಅಶೋಕ್ ದೂಡ ಗುಂಟಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ್ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮಾಂತೇಶ್ ಮೂರಗೋಡ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.