ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 14ರ ವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಸಿ.ಎಂ ನ್ಯಾಯಾಲಯವು ಆದೇಶ ಹೊರಡಿಸಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು ಆಗಸ್ಟ್ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ವಿಸ್ತರಿಸಿ ಬೆಂಗಳೂರಿನ 24ನೇ ಎಸಿ ಎಮ್ ಎಂ ನ್ಯಾಯಾಲಯವು ಇದೀಗ ಆದೇಶ ಹೊರಡಿಸಲಾಗಿದೆ.
ದರ್ಶನ್ ಅವರು ನನಗೆ ಜೈಲ್ ಊಟ ಸೇರುತ್ತಿಲ್ಲ ಇದರಿಂದ ವಾಂತಿ ಭೇದಿ ಅದು ಸಾರ ಆಗುತ್ತಿದೆ ಎಂದು ಇತ್ತೀಚಿಗೆ ಮ್ಯಾಜಿಸ್ಟ್ರೇಟರ್ ನ್ಯಾಯಾಲಯಕ್ಕೆ ಮನೆ ಊಟ ಬಟ್ಟೆ ಹಾಗೂ ಇತರೆ ವಸ್ತುಗಳಿಗಾಗಿ ಅರ್ಜಿ ಸಲ್ಲಿಸಿದರು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟರ್ ನ್ಯಾಯ ಲಘು ಅರ್ಜಿಯನ್ನು ವಜಾ ಗೊಳಿಸಿತು ಮ್ಯಾಜಿಸ್ಟ್ರೇಟರ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅವರ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು ಅರ್ಜಿ ವಿಚಾರಣೆ ನಡೆಸಿದ ಬಳಿಕ ಹೈಕೋರ್ಟ್ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೋಡಿದೆ.