ನವದೆಹಲಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿ ಒಳಗಡೆ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಒಳ ಮೀಸಲಾತಿ ಕಾನೂನು ಬದ್ಧ ಎಂದು ಹೇಳುವ ಮೂಲಕ ಐತಿಹಾಸಿಕ ತೀರ್ಪು ಪ್ರಕಟಿಸಿದೆ ಯಾವ ಜಾತಿ ಪಂಗಡಗಳಿಗೆ ಒಳ ಮೀಸಲಾತಿ ಬೇಕೆಂಬ ಅಧಿಕಾರವನ್ನು ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ವಿವೇಚನೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಚಂದ್ರಚೋಡ ನೇತೃತ್ವದ ನ್ಯಾಯಮೂರ್ತಿ ಬಿ ಆರ್ ಗವಾಯಿ, ವಿಕ್ರಂ ಸಾಥ್ , ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರಶರ್ಮ ಅವರನ್ನು ಸಂವಿಧಾನ ಪೀಠ ಈ ಮಹತ್ವದ ಆದೇಶವನ್ನು ಪ್ರಕಟಿಸಿದೆ.
ನ್ಯಾಯಮೂರ್ತಿ ಭೇಲಾ ತ್ರಿವೇದಿ ವಿಭಿನ್ನ ತೀರ್ಪು ನೀಡಿ ಅಂತಹ ಉಪ ವರ್ಗೀಕರಣಗಳನ್ನು ಅನುಮೋದಿಸಲಾಗುವುದಿಲ್ಲ ಎಂದು ತೀರ್ಪು ಪ್ರಕಟಿಸಿದರು. ಒಳ ಮೀಸಲಾತಿ ಸಂಬಂಧ ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಕಾಯ್ದೆಯ ಸಿಂಧುತ್ವ ಪ್ರಶ್ನಿಸ ಸಲ್ಲಿಕೆಯಾಗಿದ್ದ ವಿಚಾರಣಾ ಅರ್ಜಿ ನಡೆಸಿದ ಸುಪ್ರೀಂ ಕೋರ್ಟ್ ಈ ಮಹತ್ವದ ಆದೇಶ ಪ್ರಕಟಿಸಿತು.
ಪಂಜಾಬ್ ತಮಿಳುನಾಡು ಮತ್ತು ಇತರ ರಾಜ್ಯಗಳಲ್ಲಿ ಇಂತಹ ಉಪ ವರ್ಗೀಕರಣವನ್ನು ಒದಗಿಸುವ ಕಾನೂನುಗಳ ಸಿಂದತ್ವವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಪಂಜಾಬ್ ಸರ್ಕಾರ ರಚನೆ ಮಾಡಿದ್ದ ಕಾಯ್ದೆಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದು ಮಾಡಿತ್ತು ಈ ಆದೇಶವನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ ಮನವಿ ಸಲ್ಲಿಸಿತು.
ಎಸ್ಸಿ ಎಸ್ಟಿ ಜನರು ಹೆದರಿಸುತ್ತಿರುವ ವ್ಯವಸ್ಥಿತ ತಾರತಮ್ಯದಿಂದ ಸಮಾಜದಲ್ಲಿ ಮೇಲಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಸಂವಿಧಾನದ 14ನೇ ವಿಧಿ ಉಪಜಾತಿ ವರ್ಗೀಕರಣವನ್ನು ಅನುಸರಿಸಲಾಗುತ್ತಿದೆ ಮೀಸಲಾತಿ ಪಟ್ಟಿಗೆ ಸಮುದಾಯಗಳ ಸೇರ್ಪಡೆ ಅಥವಾ ತೆಗೆಯಲು ತೃಷ್ಟೀಕರಣ ರಾಜಕೀಯ ಮಾಡಬಾರದು ಪರಿಶಿಷ್ಟ ಜಾತಿಗಳು ಏಕರೂಪದ ಗುಂಪಲ್ಲ. ಎಸ್ಸಿಗಳಲ್ಲಿ ಹೆಚ್ಚು ತಾರತಮ್ಯವನ್ನು ಅನುಭವಿಸುವವರಿಗೆ 15% ಮೀಸಲಾತಿ ಅವಕಾಶ ನೀಡಲು ಸರ್ಕಾರಗಳು ಅವರನ್ನು ಉಪ ವರ್ಗೀಕರಿಸಬಹುದು ಎಸ್ ಸಿ ಗಳಲ್ಲಿ ಜಾತಿಗಳ ಉಪ ವರ್ಗೀಕರಣ ಅವರ ತಾರತಮ್ಯದ ಮಟ್ಟವನ್ನು ಆಧರಿಸಬೇಕು ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಅವರ ಪ್ರಾತಿನಿತ್ಯದ ಕುರಿತು ಪ್ರಾಯೋಗಿಕ ಡೇಟಾವನ್ನು ಸಂಗ್ರಹಿಸುವ ಮೂಲಕ ರಾಜ್ಯಗಳು ಮಾಡಬಹುದು.