ಚಿಕ್ಕಬಳ್ಳಾಪುರ : ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಕಾಣಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ.
ಚಿಂತಾಮಣಿ ತಾಲೂಕಿನ ಭುವನ್ (30) ಹಾಗೂ ಭಾನು ಪ್ರಕಾಶ್ (30) ಮೃತ ದುರ್ದೈವಿಗಳು. ಹೊಸಕೋಟೆ ಪಿಲ್ಲಗುಂಪೆ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮನೆಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಡಿ.ವೈ.ಎಸ್.ಪಿ ಮುರುಳಿಧರ್ ಭೇಟಿ ಪರಿಶೀಲನೆ ನೀಡಿ.
ಯುವಕರಿಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.