Breaking
Mon. Dec 23rd, 2024

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 34,967 ಮಂಜೂರಾತಿ ಹುದ್ದೆಗಳ ಪೈಕಿ 14532 ಹುದ್ದೆಗಳು ಖಾಲಿ…..!

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 34,967 ಮಂಜೂರಾತಿ ಹುದ್ದೆಗಳ ಪೈಕಿ 14532 ಹುದ್ದೆಗಳು ಖಾಲಿ ಇದ್ದು ಇವುಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟಿಗೆ ತಿಳಿಸಿದೆ ಸಂಬಂಧ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ವಿಚಾರಣೆ ವೇಳೆ ಸರ್ಕಾರದ ವಕೀಲರು ಸರ್ಕಾರದ ಹೇಳಿಕೆಯನ್ನು ನ್ಯಾಯ ಪೀಠಕ್ಕೆ ಸಲ್ಲಿಸಿದರು.

ವೈದ್ಯಾಧಿಕಾರಿಗಳು ತಜ್ಞರು, ದಂತ ವೈದ್ಯರು, ಲ್ಯಾಪ್ ಟೆಕ್ನಿಷಿಯನ್, ಫಾರ್ಮಸಿ, ನರ್ಸಿಂಗ್ ಅಧಿಕಾರಿಗಳು ಹಾಗೂ ಡಿ ಗ್ರೂಪ್ ನೌಕರರು ಸೇರಿದಂತೆ ಆರೋಗ್ಯ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಒಟ್ಟು ಸಂಖ್ಯೆ 34,967 ಆಗಿದ್ದು ಇದರಲ್ಲಿ 2004 ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ತಿಳಿಸಲಾಗಿದೆ. ಒಟ್ಟು 14,500 23 ಹುದ್ದೆಗಳು ಖಾಲಿ ಗೆದ್ದು ಹೊರ ಗುತ್ತಿಗೆ, ಸರ್ಕಾರಿ ಗುತ್ತಿಗೆಗೆ, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆ ಅಡಿಯಲ್ಲಿ 16500 ಹುದ್ದೆಗಳ ಕಾರ್ಯನಿರ್ವಹಣೆಯಾಗಿದ್ದು.

ಗ್ರಾಮೀಣ ಕಡ್ಡಾಯ ಸೇವೆಯಡಿಯಲ್ಲಿ 20371 ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. 204 ಕಿರಿಯ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಂತಿಯಲ್ಲಿದೆ. 414 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲಿಸಿದ್ದು 498 ಫಾರ್ಮಸಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 705 ಹುದ್ದೆಗಳ ಬರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಕಾಲಿ ಇರುವ 10253 ಡಿ ಗ್ರೂಪ್ ಹುದ್ದೆಗಳಲ್ಲಿ ಶೇಕಡಾ 75 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದರು.

ಸರ್ಕಾರದ ಹೇಳಿಕೆಗೆ ಪ್ರತಿಯಾಗಿ ಪ್ರಕರಣದ ಆಮಿಕಸ್  ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವಂತೆ ವಕೀಲ) ಶ್ರೀಧರ ಪ್ರಭು ಸರ್ಕಾರ 201371 ವೈದ್ಯರು ಗ್ರಾಮೀಣ ಕಡ್ಡಾಯ ಸೇವೆ ಅಡಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ ಗ್ರಾಮೀಣ ಕಡ್ಡಾಯ ಸೇವೆಯಿಂದ ವಿನಾಯಿತಿ ನೀಡಿ ಇದಕ್ಕೆ ಸಂಬಂಧಿಸಿದಂತೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಇದು ಮುಂದಿನ ದಿನಗಳಲ್ಲಿ ಗ್ರಾಮೀಣ ವಿಭಾಗ ವೈದ್ಯಕೀಯ ಸೇವೆ ಮೇಲೆ ಪರಿಣಾಮ ಬೀರಲಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಿ ಗ್ರೂಪ್ ನೌಕರರ ಸೇವೆ ಅತ್ಯಂತ ಅವಶ್ಯಕ ಇತ್ತೀಚೆಗೆ ಗ್ರಾಮೀಣ ಭಾಗದಲ್ಲಿ ಪ್ರಕರಣಗಳು ಹೆಚ್ಚುತ್ತಿವೆ . ವೈದ್ಯರು ತಜ್ಞ ವೈದ್ಯರು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳು ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಇದ್ದು ಈ ಅಂಶಗಳನ್ನು ನ್ಯಾಯಾಲಯ ಪರಿಗಣಿಸಬೇಕೆಂದು ಮನವಿ ಮಾಡಿದರು. ಸರ್ಕಾರದ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಇದೆ 27 ಕ್ಕೆ ಮುಂದುವಡಿಕೆ ಮಾಡಲಾಗಿದೆ.

Related Post

Leave a Reply

Your email address will not be published. Required fields are marked *