Breaking
Tue. Dec 24th, 2024

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ರಾಜ್ಯದ ಮುಖ್ಯಮಂತ್ರಿ ಅವರು ತುರ್ತಾಗಿ  ಅನುಷ್ಠಾನಕ್ಕೆ ತರಬೇಕೆಂದು ಹೈಕೋರ್ಟ್ ಹಿರಿಯ ವಕೀಲ ಎಂ ಕುಂಬಯ್ಯ ಒತ್ತಾಯ….!

ಚಿತ್ರದುರ್ಗ :  ರಾಜ್ಯದಲ್ಲಿ ಎಸ್.ಸಿ ಮತ್ತು ಎಸ್.ಟಿಗಳಿಗೆ ಒಳ ಮೀಸಲಾತಿ ನೀಡುವ ಸಂಬಂಧಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ರಾಜ್ಯದ ಮುಖ್ಯಮಂತ್ರಿ ಅವರು ತುರ್ತಾಗಿ  ಅನುಷ್ಠಾನಕ್ಕೆ ತರಬೇಕೆಂದು ಹೈಕೋರ್ಟ್ ಹಿರಿಯ ವಕೀಲ ಎಂ ಕುಂಬಯ್ಯ ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸಿದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಂಧ್ರದಲ್ಲಿ ಮಂದಿ ಕೃಷ್ಣ ಮಾದಿಗದವರು ಒಳ ಮೀಸಲಾತಿ ಜಾರಿಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ಹಾಕಿ ಅನೇಕ ಹೋರಾಟಗಳನ್ನು ನಡೆಸಿದ್ದಾರೆ. ಅದೇ ರೀತಿ ಕರ್ನಾಟಕ ತಮಿಳುನಾಡು ಪಂಜಾಬ್ ಸೇರಿದಂತೆ ನಾನಾ ರಾಜ್ಯಗಳಲ್ಲಿ ನಡೆದ ಹೋರಾಟಕ್ಕೆ ಸುಪ್ರೀಂ ಕೋರ್ಟ್ ನ ಈ ಮಹತ್ವದ ತೀರ್ಪು ಫಲ ನೀಡದೆ ಎಂದು ಸ್ವಾಗತ ಮಾಡಿದರು. 

ಶ್ರೀಮಂತರ ತುಳಿತಕ್ಕೊಳಗಾದವರಿಗೆ ನ್ಯಾಯ ಒದಗಿಸುವುದಕ್ಕಾಗಿ ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗ ರಚಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿತು ಈಗ ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಒಳ ಮೀಸಲಾತಿಯನ್ನು ಜಾರಿಗೆ ತರಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು ಕಳೆದ 30 ವರ್ಷಗಳಿಂದ ನಡೆದ ಹೋರಾಟಕ್ಕೆ ರಾಜ್ಯದಲ್ಲಿ 5000ಕ್ಕೂ ಹೆಚ್ಚು ಎಫ್ ಫೈರ್ ಗಳಾಗಿರುವುದು ರಾಜ್ಯ ಸರ್ಕಾರ ಹಿಂದಕ್ಕೆ ಪಡೆಯಬೇಕು ಅನುಸೂಚಿತ ಆಯೋಗಕ್ಕೆ ಸರ್ಕಾರ ದಲಿತರನ್ನು ನೇಮಕ ಮಾಡಬೇಕೆಂದು ಆಗ್ರಹಿಸಿದರು. ನ್ಯಾಯವಾದಿ ಬೆಸ್ತಳ್ಳಿ ಜಯನ ಮಾತನಾಡಿ ಒಳ ಮೀಸಲಾತಿಗಾಗಿ 1996ರಲ್ಲಿ ಅಲೆಮಾರಿ ಮಾದಿಗರ ಮೀಸಲಾತಿ ಹೋರಾಟ ಸಮಿತಿ ಆರಂಭಗೊಂಡಿತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಸೇರಿದಂತೆ ಅನೇಕ ಸಂಘಟನೆಗಳು ಒಳ ಮೀಸಲಾತಿಗಾಗಿ ಅನೇಕ ಹೋರಾಟ ಪಾದಯಾತ್ರೆ ಧರಣಿ ಶಾಸಕರ ನಿವಾಸದ ಎದುರು ಪ್ರತಿಭಟನೆ ಜಾತಕಗಳನ್ನು ನಡೆಸಿ ಪರಿಣಾಮವಾಗಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿರುವುದರಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಳಂಬ ಮಾಡದೆ ಒಳ ಮೀಸಲಾತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು ಮತ್ತು ಇಲ್ಲವಾದಲ್ಲಿ ಮತ್ತೆ ಹೋರಾಟಕ್ಕೆ ಇಳಿಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಒಳ ಮೀಸಲಾತಿಯಿಂದ ನಮಗೆ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ ಮೀಸಲಾತಿ ದೊರಕುವುದೇ ವಿನಹ ರಾಜಕೀಯವಾಗಿ ಅಲ್ಲ ಹೀಗಾಗಿ ದಲಿತರು ರಾಜಕೀಯವಾಗಿ ಅಧಿಕಾರದಲ್ಲಿದ್ದರೆ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಹಾಗಾಗಿ ರಾಜಕೀಯವಾಗಿಯೂ ಮೀಸಲಾತಿ ಬೇಕೆಂದು ಕೋರಿದರು.

ಕಾರ್ಯಕ್ರಮದಲ್ಲಿ ವಕೀಲ ಜೆ.ಕೆ.ಮಲ್ಲಿಕಾರ್ಜುನ್ ಮಾತನಾಡುತ್ತಾ ಒಳ ಮೀಸಲಾತಿಯನ್ನು ಆಯಾ ರಾಜ್ಯ ಸರ್ಕಾರಗಳೇ ನೀಡಬೇಕೆಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿರುವುದು ರಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತುರ್ತಾಗಿ ಅನುಷ್ಠಾನಕ್ಕೆ ತರಬೇಕು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೇರಿದಂತೆ ಅನೇಕ ಸಂಘಟನೆಗಳು ನಡೆಸಿದ ಹೋರಾಟಕ್ಕೆ ಸಿಕ್ಕಿರುವ ಪ್ರತಿಫಲ ಬೇಗನೆ ಸರ್ಕಾರದ ಆದೇಶ ಹೊರಡಿಸಬೇಕೆಂದು ವಿನಂತಿಸಿದರು. ನ್ಯಾಯವಾದಿ ವೆಂಕಟೇಶ್ ಮಾತನಾಡುತ್ತಾ ಕಳೆದ 30 40 ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಅನೇಕರು ಹೋರಾಟ ನಡೆಸಿ ಕೊಂಡು ಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸಾಮಾಜಿಕ ನ್ಯಾಯ ಸಿಕ್ಕಂತಾಗಿದೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಅನುಷ್ಠಾನಕ್ಕೆ ತರಬೇಕೆಂದು ಕೇಳಿಕೊಂಡರು.

ಹೈಕೋರ್ಟ್ನ ಹಿರಿಯ ವಕೀಲರಾದ ಮುನಿಯಪ್ಪ ತುಳಸಿರಾಮ್ ಎಂ ಕೆ. ಲೋಕೇಶ್, ಹನುಮಂತಪ್ಪ, ಶಿವಣ್ಣ, ಸುರೇಶ್, ಎಸ್ ಮಲ್ಲಿಕಾರ್ಜುನ್, ಗಿರೀಶ್, ಸಿ ಬಾಬು, ಆರ್ ಟಿ ಸ್ವಾಮಿ ಸೇರಿದಂತೆ ಇತರ ವಕೀಲರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *