ಬೆಂಗಳೂರು : ಅಪಘಾತಗಳ ನಿಯಂತ್ರಣಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ನೈಸ್ ರಸ್ತೆಯಲ್ಲಿ ರಾತ್ರಿ ಹತ್ತರಿಂದ ಐದರವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಿ ನಗರ ಪೊಲೀಸ್ ಕಮಿಷನರ್ ಬಿ ದಯಾನಂದ್ ಆದೇಶ ಹೊರಡಿಸಿದ್ದಾರೆ. ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಈ ಕ್ರಮ ಕೈಗೊಂಡಿದ್ದಾರೆ.
ಕೆಂಗೇರಿ, ಕಾಮಾಕ್ಷಿಪಾಳ್ಯ, ಜ್ಞಾನಭಾರತಿ ಮತ್ತು ಬ್ಯಾಟರಾಯನಪುರ, ತಲಘಟ್ಟಪುರ, ಕೆ.ಎಸ್ ಲೇಔಟ್, ಹುಳಿಮಾವು ಹಾಗೂ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಅಪಘಾತಗಳ ಪ್ರಕರಣಗಳು ಹೆಚ್ಚು ಸಂಖ್ಯೆಯಲ್ಲಿ ಆಗುತ್ತಿದೆ ಆ ಜಾಗೃಕತೆಯಿಂದ ನಿರ್ಲಕ್ಷತೆಯ ಚಾಲನೆಯಿಂದ ಅಪಘಾತಗಳ ಪ್ರಕರಣಗಳು ಹೆಚ್ಚುತ್ತವೆ. ಪ್ರತಿ ವರ್ಷವೂ ಅಪಘಾತದಲ್ಲಿ ಗಾಯಗೊಂಡು ಮೃತಪಟ್ಟವರ ಸಂಖ್ಯೆ ಹೆಚ್ಚಾಗುತ್ತಿದೆ ವೇಗದ ಮಿತಿ ಎಚ್ಚರಿಕೆಯ ಫಲಗಳನ್ನು ಅಳವಡಿಸಲಾಗಿದೆ.
ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದರು ಸಾವು ನೋವುಗಳು ಹೆಚ್ಚು ತಲೆ ಇವೆ ಇದಕ್ಕೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಠಾಣಾಧಿಕಾರಿಗಳು ಕಮಿಷನ್ ರಿಗೆ ವರದಿ ಸಲ್ಲಿಸಲು ತಿಳಿಸಿದ್ದಾರೆ. ಎಂಟು ಪ್ರಯಾಣಿಕರನ್ನು ಕರೆದೊಯ್ಯುವ ವಾಹನದ ವೇಗದ ಮಿತಿ ಗಂಟೆಗೆ 120 ಕಿಲೋಮೀಟರ್ 9 ಹಾಗೂ ಅದಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳು ನೂರು ಕಿಲೋಮೀಟರ್ ಹಾಗೂ ಎಲ್ಲಾ ತರಹದ ವಾಹನಗಳು ಮತ್ತು ದ್ವಿಚಕ್ರ ವಾಹನಗಳ ವೇಗದ ಮಿತಿಯನ್ನು 80 ಕಿಲೋಮೀಟರ್ ಗೆ ನಿಗದಿಪಡಿಸಲಾಗಿದೆ