ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ವಸತಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಅರಿವು ವಿದೇಶಿ ಸಾಲ ಯೋಜನೆ ಅಡಿಯಲ್ಲಿ ವಿದ್ಯಾಭ್ಯಾಸಕ್ಕಾಗಿ ನೀಡಲಾಗಿರುವ ಸಾಲ ಸೌಲಭ್ಯವನ್ನು ಅಲ್ಪಸಂಖ್ಯಾತರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಜುಲೈ 24 ರಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಆಗಸ್ಟ್ 31ರ ಒಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ವಿದೇಶಿ ಸಾಲ ಯೋಜನೆ ಅಡಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತರಾದ ಮುಸ್ಲಿಂ ಕ್ರಿಶ್ಚಿಯನ್ ಬೌದ್ಧ ಜೈನ ಸಿಖ್ ಹಾಗೂ ಪಾಶಿ ಜನಾಂಗದ ವಿದ್ಯಾರ್ಥಿಗಳು ಮಾನ್ಯತೆ ಪಡೆದಿರುವ ಯಾವುದೇ ವಿದೇಶಿ ವಿಶ್ವವಿದ್ಯಾನಿಲಯದಿಂದ ಭಾರತದ ಪ್ರತಿಷ್ಠಿತ ಐ.ಐ.ಟಿ.ಎಸ್, ಐ.ಐ.ಎಂ.ಎಸ್, ಐಎಸ್.ಸಿ ಸಂಸ್ಥೆಗಳಲ್ಲಿ ಪದವಿ ಅಥವಾ ಸ್ನಾತಕೋತರ ಪದವಿ ಪಡೆಯುವವರು ಈ ಯೋಜನೆ ನಡೆಯಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ನಿಗಮದ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು ಕನಿಷ್ಠ 38 ವರ್ಷಕ್ಕಿಂತ ಕಡಿಮೆ ವಯಸ್ಸು ಹೊಂದಿರಬೇಕು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ ಶೇಕಡ 60 ರಷ್ಟು ಅಂಕ ಗಳಿಸಿರಬೇಕು ವಿದೇಶಿ ವಿಶ್ವವಿದ್ಯಾನಿಲಯದಿಂದ ಆಫರ್ ಲೆಟರ್ ಪಡೆದಿರಬೇಕು ನಿಗಮಕ್ಕೆ ಆಸ್ತಿಯ ಅಡಮಾನದ ಮೇಲೆ ಮಾತ್ರ ಸಾಲ ಒದಗಿಸಲಾಗುವುದು ಆಸ್ತಿಯ ಮೌಲ್ಯವು ಸಾಲದ ಮತಕ್ಕಿಂತ ಕಡಿಮೆ ಇರಬಾರದು.
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಫ್ರಂಟ್ ಔಟ್ ಪಡೆದು ಕ್ಯೂಆರ್ ಕೋಡ್ ಒಂದಿನ ಅರ್ಜಿಯೊಂದಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಚಿತ್ರದುರ್ಗ ಜಿಲ್ಲಾ ವ್ಯವಸ್ಥಾಪಕರು ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-226412, 8277944213 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.