ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದೆ ರಾಜ್ಯದಲ್ಲಿ ಯಾವುದೇ ಹಗರಣಕ್ಕೂ ಸಿಲುಕದ ಜನಪರ ಕೆಲಸ ಮಾಡುತ್ತಿರುವ ಮುಖ್ಯಮಂತ್ರಿಗಳ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಮೂಡ ಹಗರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದೆ ಎಂದು ಹಾಗೂ ಅವರನ್ನು ತೇಜೋವಧೆ ಮಾಡಲಾಗಿದೆ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಮಾಜಿ ಸಚಿವ ಎಚ್ ಆಂಜನೇಯ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಾ ಜೆಡಿಎಸ್ ಮತ್ತು ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆಸಿದ ಅವ್ಯವಹಾರ ಭ್ರಷ್ಟಾಚಾರ ಸೃಜನ ಪಕ್ಷಪಾತ ಮರೆತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ, ಹೊರಟಿದ್ದಾರೆ. ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೋಡ ನಿವೇಶನ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರವಿಲ್ಲ ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಪ್ರಜಾಪ್ರಭುತ್ವಕ್ಕೆ ಅಪಚಾರ ವಾಮ ಮಾರ್ಗದಿಂದ ಅಧಿಕಾರ ಹಿಡಿದಿದ್ದ ವಿರೋಧಿಗಳು ವಿನ ಕಾರಣ ತೇಜೋವಧೆ ಮಾಡಲು ಹೊರಟಿದ್ದಾರೆ.
ಸಂವಿಧಾನದ ಪ್ರತಿನಿಧಿಯಾಗಿರಬೇಕಾದ ರಾಜ್ಯಪಾಲರು ಬಿಜೆಪಿ ಏಜೆಂಟರನಂತೆ ವರ್ತಿಸುತ್ತಿದ್ದಾರೆ ಟೀಕಿಸಿ ಎಂದರು. ಮುಖ್ಯಮಂತ್ರಿ ಗೆ ನೋಟಿಸ್ ಕೊಡುವುದಕ್ಕಿಂತಲೂ ಮುನ್ನ ರಾಜ್ಯಪಾಲರು ಯೋಚಿಸಬೇಕಾಗಿತ್ತು. ಮುಖ್ಯಮಂತ್ರಿಗಳನ್ನು ಇಳಿಸುವುದು ಸುಲಭವಲ್ಲ ಸಮಸ್ತ ಶೋಷಿತ ಸಮುದಾಯ ಸಿದ್ದರಾಮಯ್ಯನವರ ಪರವಾಗಿದೆ ಎದೆಗೊಂದು ಬೇಡ ಬಿಜೆಪಿ ಜೆಡಿಎಸ್ ಕುತಂತ್ರಿ ತನದಿಂದ ನಡೆಯಲ್ಲ 9ರಂದು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗೋಣ ಎಂದರು.
ಚಿತ್ರದುರ್ಗ ನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್ ಕೆ ಸರ್ದಾರ್ ಮಾತನಾಡುತ್ತಾ ಸಾಮಾಜಿಕ ನ್ಯಾಯದ ಹರಿಕಾರ ಬಡವರ ಪರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಮತ್ತು ಜೆಡಿಎಸ್ ಸ್ವತಂತ್ರ ನಡೆಸುತ್ತದೆ ಯಾವುದೇ ಕಳಂಕವಿಲ್ಲದ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯನವರ ವಿರುದ್ಧ ಪಿತೂರಿ ನಡೆಸುತ್ತಿರುವ ವಿರೋಧಿಗಳು ರಾಜ್ಯಪಾಲರ ಮೂಲಕ ನೋಟಿಸ್ ಕೊಡಿಸುವವರಲ್ಲಿ ಅರ್ಥವೇ ಇಲ್ಲ ಎಂದು ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಚಳುವಳಿ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಭೇಟಿ ಜಗದೀಶ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಇವರುಗಳು ರಾಜ್ಯಪಾಲರನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ನೋಟಿಸ್ ಜಾರಿ ಮಾಡಿಸಿ ಕಳೆದ 15 ದಿನಗಳಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಿರುಕುಳ ನೀಡುತ್ತಿದ್ದಾರೆ ಬಸವರಾಜ್ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ನಿವೇಶನವನ್ನು ಪಡೆದಿರುವುದು ಭ್ರಷ್ಟಾಚಾರಕ್ಕೆ ಬಿಜೆಪಿಯೇ ಹೊಣೆ ಕೋತಿ ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿದೆ ಎಂದಂತೆ ವ್ಯಂಗೆ ಮಾಡಿದರು