ಚಿತ್ರದುರ್ಗ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಆದೇಶದಂತೆ ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಾಗಿ ಶ್ರೀಮತಿ ರೇಣುಕಾ ಶಿವು ಇವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಜ್ಪೀರ್ ಕಾಂಗ್ರೆಸ್ ಕಚೇರಿಯಲ್ಲಿ ರೇಣುಕಾ ಶಿವು ಇವರಿಗೆ ನೇಮಕಾತಿ ಪತ್ರ ನೀಡಿ ನಾಗರಾಬ್ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಸಂಘಟಿಸುವಲ್ಲಿ ಪ್ರಾಮಾಣಿಕರವಾಗಿ ಶ್ರಮಿಸಿ ಪಕ್ಷಕ್ಕೆ ಶಕ್ತಿ ತುಂಬವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆಪಿ ಸಂಪತ್ ಕುಮಾರ್ ಡಿಎನ್ ಮೈಲಾರಪ್ಪ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು ಲಕ್ಷ್ಮೀಕಾಂತ್ ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ರಾಜ್ಯ ಅಧ್ಯಕ್ಷ ಟಿಪ್ಪು ಕಾಸಿಂ ಹಾಲಿ ಅಬ್ದುಲ್ಲ ಸೈಯದ್ ಅಲ್ಲಾಭಕ್ಷಿ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.