ಚಿತ್ರದುರ್ಗ ಆ.06: ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಆಚರಣೆ ಸಮಾರಂಭ ಇದೇ ಆಗಸ್ಟ್ 7 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಗಳನ್ನು ಏರ್ಪಡಿಸಲಾಗಿದೆ.
ಆಗಸ್ಟ್ 19ರಂದು ನುಲಿಯಯ್ಯ ಆಚರಣೆ ಕುರಿತಂತೆ ಆ.7ರಂದು ಬೆಳಗ್ಗೆ 11ಕ್ಕೆ ಪೂರ್ವಭಾವಿ ಸಭೆ, ಆಗಸ್ಟ್ 20ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಕುರಿತಂತೆ ಆ.7ರಂದು ಬೆಳಗ್ಗೆ 11.30ಕ್ಕೆ ಪೂರ್ವಭಾವಿ ಸಭೆ ಹಾಗೂ ಆಗಸ್ಟ್ 26ರಂದು ಮಧ್ಯಾಹ್ನ 12ಕ್ಕೆ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಆ.7ರಂದು ಮಧ್ಯಾಹ್ನ 12ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಪೂರ್ವಭಾವಿಗಳ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಹಿಸುವರು. ಸಭೆಗಳಿಗೆ ಎಲ್ಲ ಸಮಾಜದ ಕಾರ್ಯಕ್ರಮಗಳಿಗೆ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರನ್.