ಚಿತ್ರದುರ್ಗ ಆಗಸ್ಟ್.06 : ಕೇಂದ್ರ ಸರ್ಕಾರದ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಇಲಾಖೆಗಳ ಸ್ಟೆಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗೆ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 17 ಅರ್ಜಿ ಸಲ್ಲಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವವರು ಪಿಯುಸಿ ಅಥವಾ ತತ್ಸಮಾನ ಪದವಿ ಪಡೆದಿರಬೇಕು. ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸ್ಟೆನೋಗ್ರಾಫರ್ ಗ್ರೇಡ್ ಸಿ ಅಭ್ಯರ್ಥಿಗಳಿಗೆ 18-30 ವರ್ಷಗಳು, ಗ್ರೇಡ್ ಡಿ ಅಭ್ಯರ್ಥಿಗಳಿಗೆ 18-27 ವರ್ಷಗಳು, (ಎಸ್.ಟಿ, ಎಸ್.ಸಿ, ಒಬಿಸಿ, ಇಎಸ್‌ಎಂ) ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ಆಯೋಗದ ವೆಬ್‌ಸೈಟ್ www.ssckkr.kar.nic.in/ https://ssc.nic.in ವೆಬ್‌ಸೈಟ್ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ 080-25502520, ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಗೆ ಸಂಪರ್ಕಿಸಬಹುದು. ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ.