Breaking
Fri. Dec 27th, 2024

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರು ಸ್ವಯಂ ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ….!

ಚಿತ್ರದುರ್ಗ 08 :  ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ 2024ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರು ಸ್ವಯಂ ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ ಕ್ರೀಡೆ ಮತ್ತು ಹಿರಿಯ ನಾಗರೀಕ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿಗಳು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸ್ವಯಂ ಸೇವಾ ಸಂಸ್ಥೆ ಸೇರಿದಂತೆ ಒಟ್ಟು 7 ಪ್ರಶಸ್ತಿಗಳನ್ನು ನೀಡಲಾಗುವುದು. ಆದ್ದರಿಂದ ಜಿಲ್ಲೆಯ ಅರ್ಹ ಹಿರಿಯ ನಾಗರಿಕರು ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.

 ಜಿಲ್ಲಾ ಕಚೇರಿಯಿಂದ ಅರ್ಜಿಗಳನ್ನು ಪಡೆದು ನಿಗದಿತ ಅವಧಿಯೊಳಗೆ ಪೂರ್ಣ ವಿವರವನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ, ಅರ್ಜಿ ನಮೂನೆ ಹಾಗೂ ಪ್ರಸ್ತಾವನೆಯನ್ನು ನಗರದ ಸ್ಟೇಡಿಯಂ ಹತ್ತಿರ, ಬಾಲಭವನ ಆವರಣದ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಕಚೇರಿಗೆ ಸಲ್ಲಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಲು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *